ರಾಜಕೀಯ

ಕಾಂಗ್ರೆಸ್ ಅಪಪ್ರಚಾರಕ್ಕೆ ಜನತೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್‌ ಬಿಜೆಪಿ ಬಿ ಟೀಮ್‌ ಎಂದು ಕಾಂಗ್ರೆಸ್‌ ನಾಯಕರು ಚುನಾವಣಾ ಸಮಯದಲ್ಲಿ ಮಾಡಿದ ದುರುದ್ದೇಶಪೂರಿತ, ಸಲ್ಲದ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಸೂಕ್ತ ಉತ್ತರ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ಅಪಪ್ರಚಾರಕ್ಕೆ ಜನತೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ
ಹೆಚ್. ಡಿ. ಕುಮಾರಸ್ವಾಮಿ
Published On :

ಬೆಂಗಳೂರು: ಜೆಡಿಎಸ್‌  ಬಿಜೆಪಿ ಬಿ ಟೀಮ್‌ ಎಂದು ಕಾಂಗ್ರೆಸ್‌  ನಾಯಕರು ಚುನಾವಣಾ ಸಮಯದಲ್ಲಿ ಮಾಡಿದ  ದುರುದ್ದೇಶಪೂರಿತ, ಸಲ್ಲದ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಸೂಕ್ತ ಉತ್ತರ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಮುಂದಿನ ರಾಜಕೀಯ  ದಿಕ್ಸೂಚಿ ಅಲ್ಲ. ಹೀಗಾಗಿ ತಲೆ ಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ ಹಣದ ಪ್ರಭಾವ ಹೆಚ್ಚು ಕೆಲಸ ಮಾಡಿದೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಸ್ಫರ್ಧೆ ಮಾಡಿತ್ತು ಎಂದು ಆರೋಪಿಸಲಾಗದ್ದ ಮಹಾನ್ ನಾಯಕರಿಗೆ ಫಲಿತಾಂಶ ಸೂಕ್ತ ಉತ್ತರ ಕೊಟ್ಟಿದೆ ಆದರೂ ಸಿಂದಗಿ ಫಲಿತಾಂಶ ತೀವ್ರ ಬೇಸರ ಮೂಡಿಸಿದೆ ಎಂದರು.

ಮಾಜಿ ಸಚಿವ ಎಂ.ಸಿ.ಮನಗೂಳಿ ಮರಣದ ನಂತರ ಅವರ ಪುತ್ರ ಅಶೋಕ್‌ ಮನಗೂಳಿ ಅವರನ್ನು ಕಾಂಗ್ರೆಸ್‌ ಹೈಜಾಕ್‌ ಮಾಡಿ ಜಿಡಿಎಸ್ ಸಂಘಟನೆಯನ್ನೂ ದುರ್ಬಲ ಮಾಡಿತು. ಇದೇ ನವೆಂಬರ್‌ 8 ರಿಂದ 16 ರವರೆಗೆ ಪಕ್ಷದ ಕಚೇರಿಯಲ್ಲಿ ಜಿಲ್ಲಾವಾರು ಸಭೆ ಕರೆಯಲಾಗಿದ್ದು ಮುಂದಿನ ದಿನದಲ್ಲಿ ಪಕ್ಷ ಬಲಿಷ‍್ಠ ಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.