ಮಿನಿ ಸಮರ: ಸಿಂದಗಿಯಲ್ಲಿ 4ನೇ ಸುತ್ತಿನಲ್ಲಿ ಬಿಜೆಪಿಯ ರಮೇಶ್ ಭೂಸನೂರ ಮುನ್ನಡೆ, ಹಾನಗಲ್ ನಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಹಣಾಹಣಿ
ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಕ್ಷಣಕ್ಷಣಕ್ಕೂ ರೋಚಕವಾಗಿದೆ. ಸಿಂದಗಿ ಕ್ಷೇತ್ರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಮುನ್ನಡೆ ಕಾಯ್ದುಕೊಳ್ಳುತ್ತಾ ಬಂದಿದ್ದಾರೆ.

ಹಾನಗಲ್/ ಸಿಂದಗಿ: ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಕ್ಷಣಕ್ಷಣಕ್ಕೂ ರೋಚಕವಾಗಿದೆ.
ಸಿಂದಗಿ ಕ್ಷೇತ್ರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಮುನ್ನಡೆ ಕಾಯ್ದುಕೊಳ್ಳುತ್ತಾ ಬಂದಿದ್ದಾರೆ.
ಇತ್ತೀಚಿನ ವರದಿಯಂತೆ ಸಿಂದಗಿಯಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಭೂಸನೂರು 4 ಸಾವಿರದ 850 ಮತಗಳ ಮುನ್ನಡೆ ಕಾಯ್ದುಕೊಂಡು ಇದುವರೆಗೆ 13 ಸಾವಿರದ 081 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇದುವರೆಗೆ 8 ಸಾವಿರದ 231 ಮತಗಳನ್ನು, ಜೆಡಿಎಸ್ ಗೆ 423 ಮತಗಳು ಮತ್ತು ನೋಟಾ ಮತಗಳು 133 ಬಿದ್ದಿವೆ.
ಇನ್ನು ಹಾನಗಲ್ ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಮಧ್ಯೆ ನೇರ ಹಣಾಹಣಿಯಿದೆ. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯಾಗಿದ್ದು ಕಾಂಗ್ರೆಸ್ ಅಭ್ಯರ್ಥಿ 9 ಸಾವಿರದ 25 ಮತಗಳನ್ನು ಬಿಜೆಪಿ ಅಭ್ಯರ್ಥಿ 8 ಸಾವಿರದ 897 ಮತಗಳನ್ನು ಮತ್ತು ಜೆಡಿಎಸ್ ಅಭ್ಯರ್ಥಿ 75 ಮತಗಳನ್ನು ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


