ಉಪಚುನಾವಣೆ ಫಲಿತಾಂಶ ದೇಶಕ್ಕೆ ಸಂದೇಶ ಎನ್ನುವುದು ಮೂರ್ಖತನ: ಒಂದು ಫಲಿತಾಂಶ, ಹಲವು ಬಣ!
ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮುಂದುವರಿದಿದೆ. ಹಾನಗಲ್ ಉಪಚುನಾವಣೆ ಫಲಿತಾಂಶದ ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ.

ಬೆಂಗಳೂರು: ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮುಂದುವರಿದಿದೆ. ಹಾನಗಲ್ ಉಪಚುನಾವಣೆ ಫಲಿತಾಂಶದ ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ , ಸಿದ್ದರಾಮಯ್ಯ ಅವರೇ, ಕಳೆದ ಎರಡು ವರ್ಷದ ಅವಧಿಯಲ್ಲಿ ಎದುರಾದ ಉಪಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಗಮನಿಸಿದ್ದೀರಾ?
ನಿಮಗೆ ಮರೆವಿನ ಸಮಸ್ಯೆ ಇಲ್ಲ ಎಂದಾದರೆ ನಾವು ಅಂಕಿ-ಸಂಖ್ಯೆ ನೀಡುವುದಿಲ್ಲ. ಇಲ್ಲವಾದರೆ ಅಂಕಿಸಂಖ್ಯೆಗಳ ಸಮೇತ ನಿಮ್ಮ ಅವಕಾಶವಾದಿತನದ ಹೇಳಿಕೆ ಬಿಚ್ಚಿಡಬೇಕಾಗುತ್ತದೆ
ಉಪಚುನಾವಣೆ ಮುಂದಿನ ರಾಜಕೀಯದ ದಿಕ್ಸೂಚಿಯೇ ಎಂದು ಚುನಾವಣೆಗೆ ಮುನ್ನ ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸದೇ ಜಾರಿಕೊಂಡ ಡಿಕೆ ಶಿವಕುಮಾರ್, ಅವರು ಈಗ ಇದು ರಾಷ್ಟ್ರ ರಾಜಕಾರಣದ ಬದಲಾವಣೆ ಸಂಕೇತ ಎನ್ನುತ್ತಿದ್ದಾರೆ. ಗಾಳಿ ಬಂದತ್ತ ತೂರಿಕೊಳ್ಳುವುದು ನಾಯಕನ ಲಕ್ಷಣವಲ್ಲ, ಅವಕಾಶವಾದಿಕಾಂಗ್ರೆಸ್ ಎಂದು ಲೇವಡಿ ಮಾಡಿದೆ.
ನಕಲಿ ಗಾಂಧಿ ಕುಟುಂಬದ ಭದ್ರಕೋಟೆ, ತವರು ಕ್ಷೇತ್ರ ಅಮೇಥಿಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರು ಸೋತಿದ್ದರು. ಮುಖ್ಯಮಂತ್ರಿಯಾಗಿದ್ದುಕೊಂಡೇ ಸಿದ್ದರಾಮಯ್ಯ ಅವರು ತಮ್ಮ ಸ್ವಕ್ಷೇತ್ರದಲ್ಲೇ ಸೋಲನುಭವಿಸಿದ್ದಾರೆ. ಒಂದು ಕ್ಷೇತ್ರವನ್ನು ಗೆದ್ದು "ಈ ಫಲಿತಾಂಶ ದೇಶಕ್ಕೆ ಸಂದೇಶ" ಎನ್ನುವುದು ಮೂರ್ಖತನ.
ಹಾನಗಲ್ ಗೆಲುವು, ಸಿಂಧಗಿ ಸೋಲು ಸೇರಿದಂತೆ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಿಗಿಂತ ಮೊದಲು ಹೈಕಮಾಂಡ್ ತಲುಪುವ ಧಾವಂತ. ಒಂದು ಫಲಿತಾಂಶ, ಹಲವು ಬಣ! ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


