ಸಿದ್ದರಾಮಯ್ಯ ಬಣ ನೀಡುತ್ತಿರುವ ಒಳ ಏಟಿಗೆ ಡಿಕೆ ಶಿವಕುಮಾರ್ ತತ್ತರ!
ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ತಾನು ಸಿಎಂ ಆಕಾಂಕ್ಷಿ ಎಂದು ಮತ್ತೆ ವಾದ ಮಂಡಿಸಿದ್ದಾರೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ತಾನು ಸಿಎಂ ಆಕಾಂಕ್ಷಿ ಎಂದು ಮತ್ತೆ ವಾದ ಮಂಡಿಸಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲ ಡಿಕೆ ಶಿವಕುಮಾರ್ ಅವ ಅವರನ್ನು ಬಗ್ಗುಬಡಿಯುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಒಂದು ಹುದ್ದೆಗೆ ಮೂರ್ನಾಲ್ಕು ಆಕಾಂಕ್ಷಿಗಳು, ಚೇರ್ ಕಾಲಿ ಮಾಡಿಸಲು ಪ್ರಯತ್ನ ಮಾಡುತ್ತಾರೆ, ಮ್ಯೂಸಿಕಲ್ ಚೇರ್‌ನಲ್ಲಿ ಸಿಲುಕಿಕೊಂಡಿದ್ದೇವೆ ಎಂದು ಡಿಕೆ ಶಿವಕುಮಾರ್ ವಿಷಾದ ವ್ಯಕ್ತ ಪಡಿಸುತ್ತಿರುವುದೇಕೆ? ಎಂದು ಪ್ರಶ್ನಿಸಿದೆ.
ಹಾನಗಲ್ ಫಲಿತಾಂಶದ ಕ್ರೆಡಿಟ್‌ಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ನಲ್ಲಿಒಳಜಗಳ ತೀವ್ರಗೊಂಡಿದೆ. ಸಿದ್ದರಾಮಯ್ಯ ಅವರ ಬಣ ನೀಡುತ್ತಿರುವ ಒಳ ಏಟಿನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತತ್ತರಿಸಿ ಹೋಗಿದ್ದಾರೆ.
ಉಪಚುನಾವಣೆ ಫಲಿತಾಂಶದ ದಿನವೇ ಡಿಕೆಶಿ ಅವರು ವಿಷಾದದ ಮಾತುಗಳನ್ನಾಡಿದ್ದಾರೆ. ಗೆಲುವನ್ನು ಸಂಭ್ರಮಿಸುವುದಕ್ಕೂ ಕೆಪಿಸಿಸಿ ಅಧ್ಯಕ್ಷರಿಗೆ ಅವರಿಗೆ ಸಾಧ್ಯವಾಗುತ್ತಿಲ್ಲವೇ? ಕೆಲವರು ರಾಜಕೀಯದಲ್ಲಿ ಅಜೆಂಡಾ ಇಟ್ಟುಕೊಂಡಿರುತ್ತಾರೆ, ಮೂರ್ನಾಲ್ಕು ಆಕಾಂಕ್ಷಿಗಳು ಇರುತ್ತಾರೆ ಎಂಬ ಡಿಕೆ ಶಿವಕುಮಾರ್ ಅವರ ಹೇಳಿಕೆಗೂ ಮತ್ತೆ ಮುಖ್ಯಮಂತ್ರಿ ಆಗಬೇಕೆಂಬ ಸಿದ್ದರಾಮಯ್ಯ ಅವರ ಬಯಕೆಗೂ ಸಂಬಂಧವಿದೆ.
ಉಪಚುನಾವಣೆ ಫಲಿತಾಂಶ ಕೆಪಿಸಿಸಿಯಲ್ಲಿ ಮಹಾ ಸ್ಫೋಟಕ್ಕೆ ಕಾರಣವಾಗಲಿದೆ. ಉಪಚುನಾವಣೆಗೆ ಮುನ್ನ ಈ ಉಪಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ ಎನ್ನುತ್ತಿದ್ದ ಕಾಂಗ್ರೆಸ್ ಪಕ್ಷದ ನಾಯಕರು ಈಗ ಈ ಫಲಿತಾಂಶ ಕೇಂದ್ರ ಸರ್ಕಾರದ ವಿರುದ್ಧದ ಜನಾದೇಶ ಎನ್ನುತ್ತಿದ್ದಾರೆ. ಸಿಂದಗಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದೆ ಹಾಗಾದರೆ ಸಿಂದಗಿ ಫಲಿತಾಂಶದ ಬಗ್ಗೆ ನಿಮ್ಮ ವ್ಯಾಖ್ಯಾನ ಏನು? ಎಂದು ಪ್ರಶ್ನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


