ಬೊಮ್ಮಾಯಿ ಸರ್ಕಾರಕ್ಕೆ ತವರು ಜಿಲ್ಲೆಯ ಭರ್ಜರಿ ಉಡುಗೊರೆ: ಡಿಕೆಶಿ
100 ದಿನಗಳ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ತವರು ಜಿಲ್ಲೆ ಹಾನಗಲ್ ಕ್ಷೇತ್ರದ ಮತದಾರರು ಭರ್ಜರಿ ಉಡುಗೊರೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೂದಲಿಸಿದ್ದಾರೆ.

ಬೆಂಗಳೂರು: 100 ದಿನಗಳ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ತವರು ಜಿಲ್ಲೆ ಹಾನಗಲ್ ಕ್ಷೇತ್ರದ ಮತದಾರರು ಭರ್ಜರಿ ಉಡುಗೊರೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೂದಲಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಗಳ ಪಾಲಿಗೆ ಮತದಾರನೇ ಯಜಮಾನ ಎಂಬುದನ್ನು ಎರಡು ಉಪಚುನಾವಣೆಗಳ ಫಲಿತಾಂಶ ಸಾಬೀತುಪಡಿಸಿದೆ ಎಂದು ಹೇಳಿದರು.
ಉಪಚುನಾವಣೆಯ ಫಲಿತಾಂಶ ಬರುತ್ತಿದ್ದಂತೆಯೇ ಸರ್ಕಾರಗಳು ಹೇಗೆ ಹೆದರಿಕೊಂಡು ನೀತಿಗಳನ್ನು ಬದಲಾವಣೆ ಮಾಡಿಕೊಳ್ಳುತ್ತವೆ ಎಂಬುದಕ್ಕೆ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಿರುವುದೇ ಸಾಕ್ಷಿ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ 100 ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನೆ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಒಳ್ಳೆಯ ಜಾಹೀರಾತು ನೀಡಲಿ. ಅವರ ಸಾಧನೆ ನೋಡಿ ಅವರದೇ ಜಿಲ್ಲೆ ಜನ ಉಪಚುನಾವಣೆಯಲ್ಲಿ ತೀರ್ಪು ಕೊಟ್ಟಿದ್ದಾರೆ. ಅವರ ಸಾಧನೆ ಬಗ್ಗೆ ನಮ್ಮ ತಕರಾರು ಏನೂ ಇಲ್ಲ. ನಾವು ಅವರ ಆಡಳಿತದ ಬಗ್ಗೆ ದೂರುತ್ತಿಲ್ಲ. ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿಲ್ಲ. ಅವರ ನಾಯಕತ್ವದಲ್ಲಿಯೇ ಚುನಾವಣೆ ಮಾಡಬೇಕು ಎಂದು ಅವರ ಪಕ್ಷದ ನಾಯಕರೇ ಹೇಳಿದ್ದಾರೆ. ಅದು ಅವರ ಇಚ್ಛೆ' ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


