ಚುನಾವಣೆಯಲ್ಲಿ ಸೋತರೂ ಜನ ಪ್ರೀತಿಸುವಂತಹ ನಾಯಕ: ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಜಿ.ಟಿ. ದೇವೇಗೌಡ!
ಶಾಸಕ ಜಿ.ಟಿ.ದೇವೇಗೌಡ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜಕೀಯ ವೈರತ್ವ ಮರೆತು ನಗರದಲ್ಲಿ ಮಂಗಳವಾರ ಎರಡು ಕಾರ್ಯಕ್ರಮಗಳಲ್ಲಿ ವೇದಿಕೆಯನ್ನು ಹಂಚಿಕೊಂಡು, ಸೌಹಾರ್ದ ಪ್ರದರ್ಶಿಸಿ ಅಚ್ಚರಿ ಮೂಡಿಸಿದರು.

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜಕೀಯ ವೈರತ್ವ ಮರೆತು ನಗರದಲ್ಲಿ ಮಂಗಳವಾರ ಎರಡು ಕಾರ್ಯಕ್ರಮಗಳಲ್ಲಿ ವೇದಿಕೆಯನ್ನು ಹಂಚಿಕೊಂಡು, ಸೌಹಾರ್ದ ಪ್ರದರ್ಶಿಸಿ ಅಚ್ಚರಿ ಮೂಡಿಸಿದರು.
ಪರಸ್ಪರ ಹೊಗಳಿದರು. ಹಿನಕಲ್ ಹಾಗೂ ಕೇರ್ಗಳ್ಳಿಯಲ್ಲಿ ನಡೆದ ಕಾರ್ಯಕ್ರಮ ಈ ಅಪರೂಪದ ಸಮಾಗಮಕ್ಕೆ ಸಾಕ್ಷಿಯಾಯಿತು. ಡಾ.ಎಚ್.ಸಿ.ಮಹದೇವಪ್ಪ ಅವರಂತಹ ದಲಿತ ನಾಯಕರನ್ನು ಬೆಳೆಸಿದ್ದೇ ಸಿದ್ದರಾಮಯ್ಯ. ವೀರಶೈವ ಸಮಾಜದ ಮುಖಂಡರನ್ನೂ ಬೆಳೆಸಿದ್ದಾರೆ. ಚುನಾವಣೆಯಲ್ಲಿ ಸೋತರೂ ಜನ ಪ್ರೀತಿಸುವಂತಹ ನಾಯಕ ಅವರು’ ಎಂದು ದೇವೇಗೌಡರು ಶ್ಲಾಘಿಸಿದರು.
‘ಜಿ.ಟಿ.ದೇವೇಗೌಡರನ್ನು ಜೆಡಿಎಸ್‌ನಲ್ಲೇ ಉಳಿಸಿಕೊಳ್ಳಲು ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ಯತ್ನಿಸಿದ್ದಾರೆ. ಆದರೂ ಅವರು ಬರುವುದಾದರೆ ಸ್ವಾಗತ’ ಎಂದು ಆಹ್ವಾನವಿತ್ತ ಸಿದ್ದರಾಮಯ್ಯ, ‘ಜಿ.ಟಿ. ಕೇಳ್ತಾ ಇದ್ದೀಯೇನಪ್ಪಾ’ ಎಂದು ಆತ್ಮೀಯತೆ ತೋರಿದರು.
ಅದಕ್ಕೂ ಮುಂಚೆ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ‘ಜಿ.ಟಿ.ದೇವೇಗೌಡ, ಸಿದ್ದರಾಮಯ್ಯ ಅಕ್ಕ–ಪಕ್ಕ ಕುಳಿತಿದ್ದಾರೆ ಹೊಡಿರಿ ಚಪ್ಪಾಳೆ’ ಎಂದು ಹೇಳಿ ಕಾರ್ಯಕರ್ತರಲ್ಲಿ ಹುರುಪು ತುಂಬಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


