ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರ ಪ್ರಕಟ: ಹೆಚ್ಡಿ ಕುಮಾರಸ್ವಾಮಿ
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ಘೋಷಣೆ ಆಗಿರುವ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ಘೋಷಣೆ ಆಗಿರುವ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ದ ಎರಡನೇ ಹಂತದ ಸಂಘಟನಾ ಕಾರ್ಯಗಾರ ' ಜನತಾ ಸಂಗಮ 'ದ ಮೂರನೇ ದಿನ ಮಾಧ್ಯಮಗಳ ಜತೆ ಅವರು ಮಾತನಾಡಿದರು.
ಮೈಸೂರಿನಲ್ಲಿ ಎರಡು ಕ್ಷೇತ್ರಗಳು ಇವೆ. ಮೈಸೂರಿನ ಒಂದು ಕ್ಷೇತ್ರ ಹಾಗೂ ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಅಭ್ಯರ್ಥಿಗಳ ಪಟ್ಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಅವರು ಹೇಳಿದರು.
ತುಮಕೂರಿನ ನಾಯಕರ ಸಭೆ ಕೂಡ ಮಂಗಳವಾರ ಮಾಡಿದ್ದೇನೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಇಟ್ಟುಕೊಂಡಿದ್ದೇನೆ. ಅಂತಿಮ ವರದಿ, ಪರಿಶೀಲನೆ ಮುಗಿದ ಮೇಲೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಉಳಿದ ಜಿಲ್ಲೆಗಳ ಸಭೆಯನ್ನೂ ಆದಷ್ಟು ಬೇಗ ಮಾಡಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆಯಲ್ಲಿ 13-15 ಸ್ಥಾನ ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ: ಮಹೇಶ್ ತೆಂಗಿನಕಾಯಿ
ಉಳಿದಂತೆ, ಹಾಸನದ ವಿಚಾರ ಅಂತಿಮವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ. ರಾಯಚೂರು ಬಿಜಾಪುರ, ಕಲಬುರ್ಗಿಯಲ್ಲು ನಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಬೇಕು ಎಂಬ ಮನವಿ ಇದೆ. ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೆಚ್.ಡಿಕೆ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


