ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ರೂ. ಕಳವು: ಸರ್ಕಾರದ ವಿರುದ್ಧ ಎಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ
ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರತಿ ಜನಧನ್ ಖಾತೆಯ ಮೂಲಕ ಒಂದು ಅಥವಾ ಎರಡು ರೂಪಾಯಿ ಕದ್ದಿರುವ ಮಾಹಿತಿಯಿದೆ. ಇದರಲ್ಲಿ ಎರಡೂ ಪಕ್ಷಗಳು ಶಾಮೀಲಾಗಿವೆ. ಇದೊಂದು ಅಂತರರಾಷ್ಟ್ರೀಯ ಮಟ್ಟದ ಹಗರಣ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಯಾರೋ ಮಾಹಿತಿ ನೀಡಿದ್ದಾರೆ. ಅವರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದರು.
ಜನರಿಗೆ ರಾಜಕಾರಣಿಗಳ ಮೇಲಿನ ವಿಶ್ವಾಸ ಕಡಿಮೆಯಾಗಿದೆ. ಜಾಗತಿಕ ಮಟ್ಟದಲ್ಲಿಯೂ ಭಾರತದ ಮೇಲೆ ವಿಶ್ವಾಸ ಕಡಿಮೆಯಾಗುತ್ತಿದೆ. ಅಭಿವೃದ್ಧಿ ಕಾರ್ಯಗಳ ಕುರಿತ ಚರ್ಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿರಬಹುದು ಎಂದು ಅಭಿಪ್ರಾಯಪಟ್ಟರು. ಕರ್ನಾಟಕದಲ್ಲಿ ಮೂವರಲ್ಲ ನಾಲ್ವರು ಮುಖ್ಯಮಂತ್ರಿ ಆಗಬಹುದು ಎಂದು ಇದೇ ವೇಳೆ ಮತ್ತೊಂದು ಬಾಂಬ್ ಸಿಡಿಸಿದರು.
ಬಿಟ್ಕಾಯಿನ್ ಹಗರಣದ ಪ್ರಮುಖ ಆರೋಪಿಗೆ ಜಾಮೀನು ಸಿಕ್ಕಿದೆ. ಇದು ಹೇಗೆ ಸಾಧ್ಯವಾಯಿತು? ಜಾಮೀನು ಕೊಡಲು ವಾದಿಸಿದ್ದು, ಜಾಮೀನು ಕೊಟ್ಟವರು ಯಾರು? ಬಿಟ್ಕಾಯಿನ್ ಪ್ರಕರಣದಲ್ಲಿ ಹಲವರ ಹೆಸರುಗಳು ಕೇಳಿ ಬರುತ್ತಿವೆ ಚಾರ್ಜ್ಶೀಟ್ ಹಾಕುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಲಭ್ಯವಾಗಿದೆ. ದೊಡ್ಡಮಟ್ಟದಲ್ಲೇ ಈ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ. ಅಷ್ಟು ಸುಲಭವಾಗಿ ಆರೋಪಿಗೆ ಜಾಮೀನು ಹೇಗೆ ಸಿಕ್ಕಿತು? ಸರ್ಕಾರಿ ಅಭಿಯೋಜಕರು ಹೇಗೆ ವಾದ ಮಾಡಿದರು ಎಂದು ಪ್ರಶ್ನಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


