ಸಿಎಂ ಆಗುವ ಬಯಕೆಯನ್ನು ರಾಹುಲ್ ಗಾಂಧಿ ಮುಂದಿಟ್ಟಿದ್ದೇನೆ: ಪರಮೇಶ್ವರ
ಬಿಟ್‌ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ನಡುವಲ್ಲೇ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ದಲಿತ ಸಿಎಂ ವಿಚಾರವನ್ನು ಮುನ್ನೆಲೆಗೆ ತಂದಿದ್ದು...

ಬೆಂಗಳೂರು: ಬಿಟ್‌ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ನಡುವಲ್ಲೇ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ದಲಿತ ಸಿಎಂ ವಿಚಾರವನ್ನು ಮುನ್ನೆಲೆಗೆ ತಂದಿದ್ದು, ಇತ್ತೀಚೆಗಷ್ಟೇ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಯಾಗುವ ತಮ್ಮ ಬಯಕೆಯನ್ನು ವ್ಯಕ್ತಪಡಿಸಿದ್ದೇನೆಂದು ಹೇಳಿದ್ದಾರೆ.
ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಚಲವಾದಿ ಕಲಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪರಮೇಶ್ವರ್, ತಾವು ಕೂಡ ರಾಜ್ಯದ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇರುವ ಬಗ್ಗೆ ತಿಳಿಸಿದ್ದಾರೆ.
ಕಳೆದ ಕೆಲ ತಿಂಗಳುಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ತಮ್ಮ ನಡುವೆ ನಡೆದ ಮಾತುಕತೆಯ ವಿಚಾರ ವಿನಿಮಯವನ್ನು ಮಾಡಿಕೊಂಡ ಪರಮೇಶ್ವರ್, ರಾಹುಲ್ ಗಾಂಧಿ ಅವರು ತಮ್ಮನ್ನು ಏತಕ್ಕಾಗಿ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಸದ್ದು ಮೊಳಗುತ್ತಿದೆ ಎಂದು ತಮ್ಮನ್ನು ಪ್ರಶ್ನಿಸಿದ್ದರು. ಇದಕ್ಕೆ ತಾವು ಕೂಡ ರಾಜ್ಯದ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿಯುವ ಆಸೆ ಇರುವ ಬಗ್ಗೆ ರಾಹುಲ್ ಗಾಂಧಿಗೆ ತಿಳಿಸಿದ್ದೇನೆ ಎಂದರು.
ಈ ಮೂಲಕ ತಾವು ಕೂಡ ಒಮ್ಮೆ ರಾಜ್ಯದ ಮುಖ್ಯಮಂತ್ರಿ ಗದ್ದುಗೆ ಏರುವ ಇಂಗಿತವನ್ನು ವ್ಯಕ್ತಪಡಿಸುವ ಮೂಲಕ ವಿರೋಧಿ ಬಣಕ್ಕೆ ನೇರ ಟಾಂಗ್ ನೀಡಿದ್ದಾರೆ.
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇನ್ನು ಈ ಬಗ್ಗೆ ಇಷ್ಟ ಇರುವವರು ಹಾಗೂ ಇಷ್ಟ ಇಲ್ಲದೆ ಇರುವವರು ಕೂಡ ಚರ್ಚೆಯಲ್ಲಿ ಭಾಗವಹಿಸುತ್ತಾರೆ. ಮುಂದಿನ ದಿನದಲ್ಲಿ ಅದೃಷ್ಟ ಯಾರಿಗೆ ಒಲಿಯುತ್ತದೆ ನೋಡೋಣ ಎನ್ನುವ ಮೂಲಕ ದಲಿತ ಸಿಎಂ ವಿರೋಧಿ ಬಣಕ್ಕೆ ನೇರ ಎಚ್ಚರಿಕೆಯನ್ನು ಸಹ ಪರಂಮೇಶ್ವರ್ ಅವರು ರವಾನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


