ರಾಜಕೀಯ

ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿಗೆ ಭದ್ರತೆ ನೀಡುವಂತೆ ಗೃಹ ಸಚಿವರಿಗೆ ಸಿದ್ದರಾಮಯ್ಯ ಒತ್ತಾಯ

ತಂತ್ರಜ್ಞಾನ ಅವಲಂಬಿಸಿರುವ ಬಿಳಿಕಾಲರ್ ಅಪರಾಧ ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ ಪ್ರಾಣಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿರುವ ವಿಪಕ್ಷ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಶ್ರೀಕೃಷ್ಣನಿಗೆ ಸೂಕ್ತ ಭದ್ರತೆ ನೀಡುವಂತೆ ಗೃಹ ಸಚಿವರನ್ನು ಆಗ್ರಹಿಸಿದ್ದಾರೆ.

ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿಗೆ ಭದ್ರತೆ ನೀಡುವಂತೆ ಗೃಹ ಸಚಿವರಿಗೆ ಸಿದ್ದರಾಮಯ್ಯ ಒತ್ತಾಯ
ಸಿದ್ದರಾಮಯ್ಯ
Published On :

ಬೆಂಗಳೂರು: ತಂತ್ರಜ್ಞಾನ ಅವಲಂಬಿಸಿರುವ ಬಿಳಿಕಾಲರ್ ಅಪರಾಧ ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ ಪ್ರಾಣಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿರುವ ವಿಪಕ್ಷ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಶ್ರೀಕೃಷ್ಣನಿಗೆ ಸೂಕ್ತ ಭದ್ರತೆ ನೀಡುವಂತೆ ಗೃಹ ಸಚಿವರನ್ನು ಆಗ್ರಹಿಸಿದ್ದಾರೆ.

ಬಿಟ್ ಕಾಯಿನ್ ಖಾತೆಗಳ ಪಾಸ್ ವರ್ಡ್ ಸೇರಿದಂತೆ ಬಹಳಷ್ಟು ಮಾಹಿತಿಗಳು ಶ್ರೀಕಿಯ ನೆನಪಲ್ಲಿ ಮಾತ್ರ ಇದ್ದು ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ ಇರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಆ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತಮ್ಮ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು ಎನ್ನುವುದು ಗಮನಾರ್ಹ ಎಂದಿದ್ದಾರೆ. 

ಒಂದುವೇಳೆ ಆತ ಡ್ರಗ್ ವ್ಯಸನಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರಾದರೂ ಆತ ಗಲೂ ಡ್ರಗ್ ವ್ಯಸನಿಯೇ? ವ್ಯಸನಿಯಾಗಿದ್ದರೆ ಪೊಲೀಸರು ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ? ಡ್ರಗ್ಸ್ ವ್ಯಸನಿ ಎನ್ನುವುದು ಪರೀಕ್ಷೆಯಿಂದ ದೃಢಪಟ್ಟಿದ್ದರೆ ಸೂಕ್ತ ಚಿಕಿತ್ಸೆ ನೀಡಲಾಗಿದೆಯೇ ಎನ್ನುವ ಬಗ್ಗೆ ಗೃಹ ಸಚಿವರು ಮಾಹಿತಿ ನೀಡಬೇಕೆಂದು  ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.