ಒಡೆದ ಮನೆಯಾದ ಕಾಂಗ್ರೆಸ್: ಜಮೀರ್ ಫೋಟೋ ಪ್ರದರ್ಶನ! ಡಿಕೆ ಪರ ಘೋಷಣೆ; ಮುಜುಗರದಿಂದ ವೇದಿಕೆ ತೊರೆದ ಸಿದ್ದರಾಮಯ್ಯ
ಪದೇಪದೆ ಡಿಕೆ ಡಿಕೆ ಎಂದು ಕೆಲವರು ಘೋಷಣೆ ಕೂಗುತ್ತಿದ್ದರು. ಇನ್ನು ಕೆಲವರು ಜಮೀರ್ ಫೋಟೋ ಹಿಡಿದು ಘೋಷಣೆ ಹಾಕುತ್ತಿದ್ದರು. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಮತ್ತೆ ಭುಗಿಲೆದ್ದಿದೆ. ಮಂಗಳವಾರ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಬೆಂಬಲಿಗರು, ಶಾಂತಿನಗರ ಶಾಸಕ ಎನ್‌ಎ ಹ್ಯಾರೀಸ್ ಅವರನ್ನು ಕಡೆಗಣಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಯಾಗಿದೆ. ಪದೇಪದೆ ಡಿಕೆ ಡಿಕೆ ಎಂದು ಕೆಲವರು ಘೋಷಣೆ ಕೂಗುತ್ತಿದ್ದರು. ಇನ್ನು ಕೆಲವರು ಜಮೀರ್ ಫೋಟೋ ಹಿಡಿದು ಘೋಷಣೆ ಹಾಕುತ್ತಿದ್ದರು. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ.
ಬಳಿಕ ವೇದಿಕೆಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಮಾತನಾಡಬೇಕಾದರೆ ನೀವು ಕೂಗುತ್ತೀರಿ. ನೀವು ಕಾಂಗ್ರೆಸ್ ದ್ರೋಹಿಗಳೆಂದು ಡಿಕೆ ಶಿವಕುಮಾರ್ ಗರಂ ಆದರು.
ಇನ್ನೂ ಶಾಸಕ ಹ್ಯಾರಿಸ್ ಮಾತನಾಡಿ ಖರ್ಗೆ ಮತ್ತು ಶಿವಕುಮಾರ್ ಅವರನ್ನು ಹೊಗಳಿ , ಜಮೀರ್ ವಿರುದ್ಧ ಪರೋಕ್ಷವಾಗಿ ಟೀಕಿಸಿದರು. ಕಾರ್ಯಕ್ರಮಕ್ಕೆ ಸಿಎಂ ಇಬ್ರಾಹಿಂ ಕೂಡ ಆಗಮಿಸಿರಲಿಲ್ಲ. ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಎಂ ಇಬ್ರಾಹಿಂ, ಅವರೆಲ್ಲಾ ಧೀಮಂತ ನಾಯಕರು, ಅವರ ಜೊತೆ ಸೇರುವುದು ಸರಿಯಲ್ಲ ಎಂದು ನಾನು ಕಾರ್ಯಕ್ರಮಕ್ಕೆ ಬರಲಿಲ್ಲ ಎಂದು ವ್ಯಂಗ್ಯವಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


