ಎ.ಕೆ. ಆಂಟನಿ ನೇತೃತ್ವದ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಸದಸ್ಯರಾಗಿ ಡಾ. ಜಿ.ಪರಮೇಶ್ವರ್ ನೇಮಕ
ಕೇರಳದ ಎ.ಕೆ. ಆಂಟನಿ ಅವರನ್ನು ಕಾಂಗ್ರೆಸ್ ಪಕ್ಷದ ಶಿಸ್ತು ಪಾಲನಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿದ್ದ ಡಾ. ಜಿ. ಪರಮೇಶ್ವರ್ ಅವರನ್ನು ಶಿಸ್ತು ಪಾಲನಾ ಸಮಿತಿ ಸದಸ್ಯರನ್ನಾಗಿ ನೇಮಿಸುವ ಮೂಲಕ ಪಕ್ಷದ ಕೇಂದ್ರ ಸಂಘಟನೆಗೆ ನಿಯೋಜಿಸಿದಂತಾಗಿದೆ.

ನವದೆಹಲಿ: ಕೇರಳದ ಎ.ಕೆ. ಆಂಟನಿ ಅವರನ್ನು ಕಾಂಗ್ರೆಸ್ ಪಕ್ಷದ ಶಿಸ್ತು ಪಾಲನಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿದ್ದ ಡಾ. ಜಿ. ಪರಮೇಶ್ವರ್ ಅವರನ್ನು ಶಿಸ್ತು ಪಾಲನಾ ಸಮಿತಿ ಸದಸ್ಯರನ್ನಾಗಿ ನೇಮಿಸುವ ಮೂಲಕ ಪಕ್ಷದ ಕೇಂದ್ರ ಸಂಘಟನೆಗೆ ನಿಯೋಜಿಸಿದಂತಾಗಿದೆ.
ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ , ಮಾಜಿ ಕೇಂದ್ರ ಸಚಿವೆ ಅಂಬಿಕಾ ಸೋನಿ ಹಾಗೂ ಹಿರಿಯ ಮುಖಂಡ ತಾರಿಖ್ಅನ್ವಾರ್ ಅವರನ್ನು ಸೇರಿದಂತೆ ಐವರು ಸದಸ್ಯರನ್ನೊಳಗೊಂಡ ಪಕ್ಷದ ಶಿಸ್ತು ಪಾಲನಾ ಸಮಿತಿಯನ್ನು ಗುರುವಾರ ಕಾಂಗ್ರೆಸ್ ಪುನರ್ ರಚಿಸಿದೆ.
ಕೂಡಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಅಧ್ಯಕ್ಷರು ಎಐಸಿಸಿ ಶಿಸ್ತು ಪಾಲನಾ ಸಮಿತಿಯನ್ನು ಪುನರ್ ರಚಿಸಿದ್ದು, ಎ. ಕೆ. ಆಂಟನಿ ಇದರ ಮುಖ್ಯಸ್ಥರಾಗಿರುತ್ತಾರೆ. ತಾರಿಖ್ ಅನ್ವರ್ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ ಎಂದು ಪಕ್ಷದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೆಹಲಿಯ ಮಾಜಿ ಸಂಸದ ಜೈ ಪ್ರಕಾಶ್ ಅಗರ್ ವಾಲ್ ಮತ್ತು ಜಿ ಪರಮೇಶ್ವರ್ ಈ ಸಮಿತಿಯ ಇತರ ಪ್ರಮುಖ ಸದಸ್ಯರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


