ಮುರುಗೇಶ್ ನಿರಾಣಿ ಒಂದಲ್ಲ ಒಂದು ದಿನ ಸಿಎಂ ಆಗ್ತಾರೆ: ಸಚಿವ ಕೆ.ಎಸ್. ಈಶ್ವರಪ್ಪ
ನಾಯಕ ಮರುಗೇಶ್ ನಿರಾಣಿ ಒಂದಲ್ಲ ಒಂದು ದಿನ ಮುಖ್ಯಮಂತ್ರಿಯಾಗುತ್ತಾರೆ. ಹೀಗೆಂದು ಹೇಳಿದ ಮಾತ್ರ ಈಗಿರುವ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿಬಿಡುತ್ತಾರೆ ಎಂದರ್ಥವಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಮಾರ್ಮಿಕವಾಗಿ ಹೇಳಿದ್ದಾರೆ.

ಬಾಗಲಕೋಟೆ: ನಾಯಕ ಮರುಗೇಶ್ ನಿರಾಣಿ ಒಂದಲ್ಲ ಒಂದು ದಿನ ಮುಖ್ಯಮಂತ್ರಿಯಾಗುತ್ತಾರೆ. ಹೀಗೆಂದು ಹೇಳಿದ ಮಾತ್ರ ಈಗಿರುವ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿಬಿಡುತ್ತಾರೆ ಎಂದರ್ಥವಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಮಾರ್ಮಿಕವಾಗಿ ಹೇಳಿದ್ದಾರೆ.
ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಡೆದ ವಿಜಾಪುರ ಹಾಗೂ ಬಾಗಲಕೋಟೆ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಈಶ್ವರಪ್ಪ,ನಮ್ಮ ನಾಯಕರಾದ ಮುರುಗೇಶ್ ನಿರಾಣಿ ರಾಜ್ಯದ ಮುಖ್ಯಮಂತ್ರಿ ಆಗುವುದು ನೂರಕ್ಕೆ ನೂರರಷ್ಟು ಖಚಿತವಾದರೂ ಅದು ನಾಳೆಯೇ ಎಂದು ಹೇಳುತ್ತಿಲ್ಲ ಈ ರೀತಿ ಹೇಳಿದೆ ಎಂದರೆ, ಈಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರನ್ನು ತೆಗೆದುಬಿಡುತ್ತಾರೆ ಎಂದು ಪತ್ರಕರ್ತರು ಸೇರಿದಂತೆ ಯಾರೊಬ್ಬರೂ ಅನ್ಯಥಾ ಭಾವಿಸಬಾರದು ಎಂದು ನೀಡಿದ ಹೇಳಿಕೆಗೆ ಈಶ್ವರಪ್ಪ ಸ್ಪಷ್ಟನೆಯನ್ನೂ ನೀಡಿದರು.
ರಾಜ್ಯದ ಮುಖ್ಯಮಂತ್ರಿ ಆಗುವ 'ಅರ್ಹತೆ' ನಿರಾಣಿಯವರಿಗೆ ಇದೆ. ಅವರಿಗೆ ರಾಜ್ಯವನ್ನು ಮುನ್ನಡೆಸುವ ಶಕ್ತಿ ಇದೆ. ಒಂದಲ್ಲೊಂದು ದಿನ ಆ 'ಸ್ಥಾನಕ್ಕೆ' ಬರಲಿದ್ದಾರೆ.
ರಾಜ್ಯದಲ್ಲಿ ಹಿಂದುಳಿದ ವರ್ಗದವರಿಗೆ ನ್ಯಾಯ ಕೊಡುವ ನಾಯಕ ಮುಖ್ಯಮಂತ್ರಿ ಆಗಬೇಕು ಎಂಬುದು ಬಹುತೇಕ ಜನತೆಯ ಆಶಯವಾಗಿದೆ. ನಿರಾಣಿ ಅವರು ಸಿ.ಎಂ ಆದರೆ ಖಂಡಿತವಾಗಿ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಈಶ್ವರಪ್ಪ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


