ಉಪ ಚುನಾವಣೆ ಗೆಲುವಿಗೆ ಹೋರಾಟ: ಡಿಕೆ ಶಿವಕುಮಾರ್
ಸಿಂಧಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಕಾಂಗ್ರೆಸ್ ಪ್ರತಿಷ್ಠೆ ಯನ್ನಾಗಿ ತೆಗೆದುಕೊಂಡಿದ್ದು, ಗೆಲುವಿಗಾಗಿ ತೀವ್ರ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ . ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಸಿಂಧಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಕಾಂಗ್ರೆಸ್ ಪ್ರತಿಷ್ಠೆ ಯನ್ನಾಗಿ ತೆಗೆದುಕೊಂಡಿದ್ದು, ಗೆಲುವಿಗಾಗಿ ತೀವ್ರ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ . ಶಿವಕುಮಾರ್ ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ನಮಗೆ ಅಭ್ಯರ್ಥಿಗಳ ಬದಲಿಗೆ ಪಕ್ಷದ ಗೆಲುವು ಬಹಳ ಮುಖ್ಯ ಎಂದು ಪರೋಕ್ಷವಾಗಿ ಜೆಡಿಎಸ್ ಟಾಂಗ್ ನೀಡಿದರು. ಕ್ಷೇತ್ರಗಳಲ್ಲಿ ನಮಗೆ ಅಭ್ಯರ್ಥಿ ಮುಖ್ಯವಲ್ಲ, ಗೆಲುವು ಮುಖ್ಯ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಪಕ್ಷದ ನಾಯಕರು ಚುನಾವಣಾ ತಯಾರಿ ಮಾಡಿಕೊಂಡಿದ್ದಾರೆ ಎಂದರು.
ಇದೇ 4ರಂದು ಸಿಂದಗಿಗೆ ಹಾಗೂ 7ರಂದು ಹಾನಗಲ್ ಕ್ಷೇತ್ರಕ್ಕೆ ತೆರಳಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇವೆ ಎಂದು ಅವರು ತಿಳಿಸಿದರು. ದಲಿತರು ಮುಖ್ಯಮಂತ್ರಿ ಆಗಬಹುದು' ಎಂಬ ಡಾ ಜಿ . ಪರಮೇಶ್ವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಎಲ್ಲರೂ ಆಸೆ ಪಡಬಹುದು. ಆದರೆ ಪಕ್ಷ ಎಲ್ಲವನ್ನು ತೀರ್ಮಾನ ಮಾಡಲಿದೆ ಎಂದರು.
Related Article
ಸಿಂದಗಿ-ಹಾನಗಲ್ ಉಪಚುನಾವಣೆ ಗೆಲ್ಲಲು ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ! ಅಖಾಡಕ್ಕಿಳಿಯುತ್ತಾರಾ ಬಿಎಸ್ ವೈ?
ಜೆಡಿಎಸ್-ಕಾಂಗ್ರೆಸ್ ನಿಂದ ಬಂದವರಿಗೆ ಆದ್ಯತೆ; ನಮ್ಮ ಗೋಳು ಕೇಳೋರು ಯಾರು?: ಬೊಮ್ಮಾಯಿ ಮುಂದೆ ಶಾಸಕರ ಅಳಲು!
ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ: ಕಾರ್ಯತಂತ್ರ ರೂಪಿಸುವಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಮಗ್ನ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


