ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ: ಸಿದ್ದರಾಮಯ್ಯ
ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ದುರುದ್ದೇಶದಿಂದಲೇ ಜೆಡಿಎಸ್ ಪಕ್ಷ ಆಯ್ದ ಚುನಾವಣಾ ಕ್ಷೇತ್ರದಲ್ಲಿ ಮಾತ್ರ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುತ್ತದೆ. ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸಿದರು. ಈಗ ಸಿಂದಗಿಯಲ್ಲಿಯೂ ಇದನ್ನೇ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂಡ್ಯ, ಮೈಸೂರು ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ನೀಡುವುದಿಲ್ಲ. ಬಿಜೆಪಿಗೆ ಅನುಕೂಲ ಮಾಡಿಕೊಡಲು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸುತ್ತಾರೆ ಎಂದು ದೂರಿದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದಿದ್ದರೆ ಹಾಸನ, ಮೈಸೂರು, ಮಂಡ್ಯ ಭಾಗದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಬಹುದಲ್ಲವೇ? ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಯಾರಾದರೂ ಮುಸ್ಲಿಮರನ್ನು ಮಂತ್ರಿ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


