ರಾಜಕೀಯ

'ಕಾಂಗ್ರೆಸ್ ಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ'

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ– ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ.

'ಕಾಂಗ್ರೆಸ್ ಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ'
ಸಿದ್ದರಾಮಯ್ಯ
Published On :

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ– ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’ ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಪ್ರಮುಖರ ಸಮಿತಿ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡುವಾಗ ‘ಬಿಜೆಪಿ– ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

ಇನ್ನೊಬ್ಬರ ಮನೆಯೊಳಗೆ ಇಣುಕಿ ನೋಡುವ ಕೆಟ್ಟ ಚಟ ಸಿದ್ದರಾಮಯ್ಯ ಅವರಿಗೆ ಏಕೆ ಬಂತೋ ಗೊತ್ತಿಲ್ಲ. ಆದರೆ, ಅದು ಒಳ್ಳೆಯ ಲಕ್ಷಣವಲ್ಲ’ ಎಂದರು. ಒಳ ಒಪ್ಪಂದದ ಕಾರಣದಿಂದ ಜೆಡಿಎಸ್‌ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ರವಿ, ‘ಯಾವ ಪಕ್ಷದವರು ಯಾರಿಗೆ ಟಿಕೆಟ್‌ ನೀಡಬೇಕು ಎಂಬುದನ್ನು ನಾನು ಹೇಳಲು ಸಾಧ್ಯವೆ? ಕಾಂಗ್ರೆಸ್‌ನವರು ಯಾವತ್ತಾದರೂ ಆರೆಸ್ಸೆಸ್‌ನವರಿಗೆ ಟಿಕೆಟ್‌ ಕೊಟ್ಟಿದ್ದಾರಾ? ಅವರಿಗೆ ರಾಷ್ಟ್ರೀಯ ಹಿತ ಇಲ್ಲ ಎಂದು ನಾನು ಹೇಳಲು ಸಾಧ್ಯವೆ’ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.