ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ ಮನಸ್ಸಿಗೆ ಸಾಕ್ಷಿ: ಸಿದ್ದರಾಮಯ್ಯ
ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ ಮನಸ್ಸಿಗೆ ಸಾಕ್ಷಿ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಂಗಳೂರು: ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ ಮನಸ್ಸಿಗೆ ಸಾಕ್ಷಿ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ‘ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಗೂಂಡಾ ರಾಜ್ಯದಲ್ಲಿ ದಲಿತರು, ರೈತರು, ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ
ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದುಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿ ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ ಅಲ್ಲಿನ ಸರ್ಕಾರವನ್ನು ವಜಾಗೊಳಿಸಬೇಕು’ ಎಂದು
ಆಗ್ರಹಿಸಿದ್ದಾರೆ.
ಪ್ರತಿರೋಧ- ಭಿನ್ನಾಭಿಪ್ರಾಯವನ್ನು ಸಹಿಸದ ಬಿಜೆಪಿ ಸರ್ಕಾರ, ತನ್ನ ತಾಲಿಬಾನಿ ಮನಸ್ಥಿತಿಯನ್ನು ಬತ್ತಲು ಮಾಡಿಕೊಳ್ಳುತ್ತಿದೆ. ರೈತರ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಲು
ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಯೋಗಿ ಆದಿತ್ಯನಾಥ ಸರ್ಕಾರದ ಕೃತ್ಯ ಖಂಡನೀಯ’ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


