ಹಾನಗಲ್, ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ
ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಸಂಜೆ ಪ್ರಕಟಿಸಿದೆ.

ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಸಂಜೆ ಪ್ರಕಟಿಸಿದೆ. ಹಾನಗಲ್ ನಿಂದ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಹಾಗೂ ಸಿಂದಗಿಯಿಂದ ಅಶೋಕ ಮನಗೊಳಿ ಅವರಿಗೆ ಟಿಕೆಟ್ ನೀಡಲಾಗಿದೆ.
ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಎಂ. ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೊಳಿ ಇತ್ತೀಚಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅವರಿಗೆ ಟಿಕೆಟ್ ಎಂದು ಈ ಹಿಂದೆ ಮೌಖಿಕವಾಗಿ ಹೇಳಿಕೆ ನೀಡಲಾಗುತಿತ್ತು. ಆದರೆ, ಇಂದು ಅಧಿಕೃತವಾಗಿ ಅವರಿಗೆ ಟಿಕೆಟ್ ಘೋಷಿಸಲಾಗಿದೆ.
ಇನ್ನೂ ಶ್ರೀನಿವಾಸ ಮಾನೆ 2018ರ ವಿಧಾನಸಭಾ ಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಅಂತಿಮವಾಗಿ ಮಾನೆ ಅವರಿಗೆ ಕಾಂಗ್ರೆಸ್ ವರಿಷ್ಠರು ಮಣೆ ಹಾಕಿದ್ದಾರೆ. ಅಕ್ಟೋಬರ್ 30 ರಂದು ಈ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.
Related Article
ಸಿಂದಗಿ-ಹಾನಗಲ್ ಉಪಚುನಾವಣೆಗೆ ಅಭ್ಯರ್ಥಿಗಳ ಶಿಫಾರಸು: ರೇವತಿ ಉದಾಸಿ ಪರ ಬೊಮ್ಮಾಯಿ- ಬಿಎಸ್ ವೈ ಒಲವು!
ಸಿಂದಗಿ, ಹಾನಗಲ್ ಉಪ ಚುನಾವಣೆ- ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್'ಗೆ ರವಾನಿಸಿದ ರಾಜ್ಯ ಕಾಂಗ್ರೆಸ್
ಹಾನಗಲ್ ಕ್ಷೇತ್ರದಿಂದ ಶಿವಕುಮಾರ್ ಉದಾಸಿ ಪತ್ನಿ ಕಣಕ್ಕೆ? ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಫೈನಲ್!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


