'ಸಂಘದ ಬಗ್ಗೆ ಅನುಮಾನಗಳಿದ್ದರೆ ದೇವೇಗೌಡರಲ್ಲಿ ಕೇಳಿ; ಸಿದ್ಧಾಂತಗಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಅಪ್ರಬುದ್ಧತೆಗೆ ಸಾಕ್ಷಿ'
ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬೆಂಗಳೂರು: ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಟಿ ರವಿ, ಸಂಘದ ಸಿದ್ಧಾಂತ ಒಪ್ಪಿದರೇ ನಿಮಗೂ ಸ್ವಾಗತ ಎಂದಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಟಿ ರವಿ, ಕುಮಾರಸ್ವಾಮಿಯವರೇ ನಿಮಗೆ ಆರ್‌ಎಸ್‌ಎಸ್ ಬಗ್ಗೆ ಇನ್ನೂ ಅನುಮಾನಗಳಿದ್ದರೆ ನಿಮ್ಮ ತಂದೆ ದೇವೇಗೌಡರಲ್ಲಿ ಆ ಬಗ್ಗೆ ಕೇಳಿ. ದೇವೇಗೌಡರೇ ಆರ್‌ಎಸ್‌ಎಸ್ ಸಿದ್ಧಾಂತವನ್ನು ಒಪ್ಪಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ.
ಆರ್ಎಸ್ಎಸ್ನಲ್ಲಿ ವ್ಯಕ್ತಿ ನಿರ್ಮಾಣದ ಜೊತೆ ರಾಷ್ಟ್ರ ನಿರ್ಮಾಣದ ಧ್ಯೇಯ ಇರುವ ಕಾರಣ ಇಂದು ನಮ್ಮ ಪ್ರಧಾನಿಗಳು, ರಾಷ್ಟ್ರಪತಿ, ಉಪರಾಷ್ಟ್ರಪತಿ, ಸಂಘದ ಸ್ವಯಂ ಸೇವಕರು. ಉನ್ಮತ ಮಟ್ಟದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಶೂನ್ಯಮಟ್ಟಕ್ಕೆ ತಂದಿದ್ದಾರೆ.
ಇದು ಯಾವುದರ ಪರಿಣಾಮ ಸನ್ಮಾನ್ಯ @hd_kumaraswamy ಅವರೇ?
1/14
— C T Ravi
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


