ಉಪ ಚುನಾವಣೆ: ಹಾನಗಲ್, ಸಿಂಧಗಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರಗಳ ಸಲ್ಲಿಕೆ
ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆ ಕಾವು ರಾಜ್ಯದಲ್ಲಿ ನಿಧಾನವಾಗಿ ಕಾವೇರತೊಡಗಿದೆ. ಹಾನಗಲ್ ನಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ನಾಮಪತ್ರ ಸಲ್ಲಿಸಿದರು.

ಹಾನಗಲ್: ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆ ಕಾವು ರಾಜ್ಯದಲ್ಲಿ ನಿಧಾನವಾಗಿ ಕಾವೇರತೊಡಗಿದೆ. ಹಾನಗಲ್ ನಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆ ಬಳಿಕ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ರೋಡ್ ಶೋ ನಡೆಸುವ ಮೂಲಕ ಶ್ರೀನಿವಾಸ್ ಮಾನೆ ಪರವಾಗಿ ಮತಯಾಚಿಸಿದರು. ಪಕ್ಷದ ನೂರಾರು ಕಾರ್ಯಕರ್ತರು ರೋಡ್ ಶೋ ನಲ್ಲಿ ಪಾಲ್ಗೊಂಡಿದ್ದರು.
ಮತ್ತೊಂದೆಡೆ ಸಿಂಧಗಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಜಾತ್ಯಾತೀತ ಜನತಾದಳ-ಜೆಡಿಎಸ್ ಅಭ್ಯರ್ಥಿಯಾಗಿ ನಾಜಿಯಾ ಶಕೀಲಾ ಅಂಗಡಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪಕ್ಷದ ಮುಖಂಡರಾದ ಎಚ್ ಡಿ ಕುಮಾರಸ್ವಾಮಿ, ಬಂಡೆಪ್ಪ ಕಾಶೆಂಪೂರ್ ಮುಖಂಡರು ನಾಜಿಯಾ ಅವರಿಗೆ ಸಾಥ್ ನೀಡಿ ಶುಭ ಹಾರೈಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


