ಬಿಜೆಪಿ ನಾಯಕರ ವಾಹನ ಬಂದಾಗ ಎಚ್ಚರ, ಎಚ್ಚರ…!
ಬಿಜೆಪಿ ನಾಯಕರ ವಾಹನ ಬಂದಾಗ ಬಹಳ ಎಚ್ಚರಿಕೆ, ಜೋಪಾನ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ .ಶಿವಕುಮಾರ್ ಅವರು ಶುಕ್ರವಾರ ಜನತೆಗೆ ಕಿವಿಮಾತು, ಬುದ್ದಿಮಾತು ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ನಾಯಕರ ವಾಹನ ಬಂದಾಗ ಬಹಳ ಎಚ್ಚರಿಕೆ, ಜೋಪಾನ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ .ಶಿವಕುಮಾರ್ ಅವರು ಶುಕ್ರವಾರ ಜನತೆಗೆ ಕಿವಿಮಾತು, ಬುದ್ದಿಮಾತು ಹೇಳಿದ್ದಾರೆ.
ಬಿಜೆಪಿ ನಾಯಕರ ಕಾರು ನಿಮ್ಮ ಅಕ್ಕ ಪಕ್ಕದಲ್ಲಿ ಹೋಗುವಾಗ ಮೊಬೈಲ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ಎಂಬುದೇ ತಿಳಿಯುವುದಿಲ್ಲ ಎಂದು ಡಿ ಕೆ ಶಿವಕುಮಾರ್ ಮೂದಲಿಸಿದ್ದಾರೆ.
ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವರೊಬ್ಬರ ಪುತ್ರನ ಕಾರು ಹರಿದ ಘಟನೆಯಿಂದ ಆರು ರೈತರು ಮೃತಪಟ್ಟ ಪ್ರಕರಣವನ್ನು ಉಲ್ಲೇಖಿಸಿ ವಿಡಿಯೋ ಬಿಡುಗಡೆ ಮಾಡಿರುವ ಡಿಕೆ ಶಿವಕುಮಾರ್, ಬಿಜೆಪಿ ನಾಯಕರು ಸಾಮಾನ್ಯ ಜನರ ಮೇಲೆ ವಾಹನ ಚಲಾಯಿಸಿದ ದಾಖಲೆ ಹೊಂದಿದ್ದಾರೆ. ಕೇಸರಿ ಪಕ್ಷದ ಕುರಿತು ಜನರು ಜಾಗೃತರಾಗಿರಬೇಕು. ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮೆರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವಿಡಿಯೋ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


