ರಾಜ್ಯ ಉಪಚುನಾವಣೆ: ಸಿಂದಗಿ ಗೆಲ್ಲಲು ಬಿಜೆಪಿ 7 ತಂಡಗಳ ರಚನೆ
ಸಿಂದಗಿ ಉಪಚುನಾವಣೆಗೆ ಕೇವಲ ಮೂರು ವಾರಗಳಷ್ಟೇ ಬಾಕಿ ಉಳಿದಿದ್ದು, ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರ ಗೆಲುವಿಗೆ ಬಿಜೆಪಿ ತಳಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ 7 ತಂಡಗಳನ್ನು ರಚಿಸಿದೆ.

ವಿಜಯಪುರ: ಸಿಂದಗಿ ಉಪಚುನಾವಣೆಗೆ ಕೇವಲ ಮೂರು ವಾರಗಳಷ್ಟೇ ಬಾಕಿ ಉಳಿದಿದ್ದು, ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರ ಗೆಲುವಿಗೆ ಬಿಜೆಪಿ ತಳಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ 7 ತಂಡಗಳನ್ನು ರಚಿಸಿದೆ.
7 ತಂಡಗಳ ಪೈಕಿ ಆರು ತಂಡಗಳ ನೇತೃತ್ವವನ್ನು ಸಚಿವ ಸಂಪುಟದ ಸದಸ್ಯರು ವಹಿಸಿಕೊಂಡಿದ್ದಾರೆ. ಪ್ರತಿತಂಡವು ಜಿಲ್ಲಾ ಪಂಚಾಯತ್ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.
ಸಿಂಧಗಿ ಉಪಚುನಾವಣೆಗೆ ಮಾಜಿ ಶಾಸಕ ರಮೇಶ್ ಭೂಸನೂರ್ ಸ್ಪರ್ಧಿಸಿದ್ದಾರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ರಮೇಶ್ 9,305 ಮತಗಳ ಅಂತರದಿಂದ ಸೋಲನುಭವಿಸಿದ್ದರು.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಿಂದಗಿ ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದು, ಪ್ರಚಾರದ ಪ್ಲಾನ್ ಗಳನ್ನು ಈಗಾಗಲೇ ರೂಪಿಸಲಾಗಿದೆ ಎಂದು ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಗೆಲ್ಲಲು ನಾವು ಗಂಭೀರವಾಗಿ ತಯಾರಿ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಸಚಿವರಾದ ಗೋವಿಂದ್ ಕಾರಜೋಳ, ಕೆಎಸ್ ಈಶ್ವರಪ್ಪ ಮತ್ತು ವಿ. ಸೋಮಣ್ಣ , ಸಿಸಿ ಪಾಟೀಲ್ ಹಾಗೂ ಬೈರತಿ ಬಸವರಾಜ್ ಮತ್ತು ಶಶಿಕಲಾ ಜೊಲ್ಲೆ ಅವರುಗಳು ಸಿಂಧಗಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಜಿಲ್ಲಾ ಪಂಚಾಯತ್ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ವಿಜಯಪುರ ಮತ್ತು ಕಲಬುರಗಿ ಭಾಗದ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕನಿಷ್ಠ ನಾಲ್ಕು ಕ್ಯಾಬಿನೆಟ್ ಮಂತ್ರಿಗಳು ಪ್ರಚಾರದ ಕೊನೆಯ ದಿನದವರೆಗೂ ಪ್ರತಿ ದಿನ ಪ್ರಚಾರ ನಡೆಸುತ್ತಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಸಿಂದಗಿಯಲ್ಲಿ ಎರಡು ದಿನಗಳ ಕಾಲ ಪ್ರಚಾರ ಮಾಡುತ್ತಾರೆ. ನಾವು 25,000 ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಸವದಿ ಹೇಳಿದರು.
ಗಾಣಿಗ (ಲಿಂಗಾಯತರ ಉಪ-ಪಂಗಡ) ಮತದಾರರನ್ನು ಆಕರ್ಷಿಸಲು ಪಕ್ಷವು ಸವದಿ ಅವರನ್ನು ನೇಮಿಸಿದೆ. ಇತರ ಸಮುದಾಯಗಳಿಗೆ ಹೋಲಿಸಿದರೆ ಲಿಂಗಾಯತ ಸಮುದಾಯವು ಮತದಾನದಲ್ಲಿ ಸಿಂಹಪಾಲು ಹೊಂದಿದೆ. ಎಸ್‌ಸಿ ಮತಗಳನ್ನು ಗಳಿಸುವ ಜವಾಬ್ದಾರಿಯನ್ನು ಕಾರಜೋಳ್ ಅವರಿಗೆ ನೀಡಲಾಗಿದೆ, ಸಿಸಿ ಪಾಟೀಲ್ ಮತ್ತು ಶಶಿಕಲಾ ಜೊಲ್ಲೆ ಲಿಂಗಾಯತ ಮತಗಳನ್ನು, ಈಶ್ವರಪ್ಪ ಮತ್ತು ಬೈರತಿ ಬಸವರಾಜ್ ಅವರನ್ನು ಕುರುಬರ ಮತಗಳಿಗಾಗಿ ಸಜ್ಜುಗೊಳಿಸಿದೆ. ಇದರ ಹೊರತಾಗಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಯಡಿಯೂರಪ್ಪ ಪಕ್ಷದ ಸ್ಟಾರ್ ಪ್ರಚಾರಕರಾಗುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಸಿಂದಗಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಲಿಂಗಾಯತ ಅಭ್ಯರ್ಥಿಯನ್ನು (ಅಶೋಕ್ ಮನಗೂಳಿ) ಕಣಕ್ಕಿಳಿಸಿದೆ. ಈ ಹಿಂದೆ ಅವರು ಕುರುಬ ಅಥವಾ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಇದರಿಂದ ಖಂಡಿತವಾಗಿಯೂ ಲಿಂಗಾಯತ ಮತಗಳನ್ನು ವಿಭಜಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


