'ತಕ್ಕಡಿ ಮೇಲೆಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವಿಷ್ಯವಿಲ್ಲ ಎಂದು ಪಕ್ಷದ ಮುಖಂಡರೇ ಗುಟ್ಟಾಗಿ ಒಪ್ಪಿಕೊಂಡಿದ್ದಾರೆ'
ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ. ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ.
ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
ತಕ್ಕಡಿ ಮೇಲೇಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರೇ ಗುಟ್ಟಾಗಿ ಒಪ್ಪಿಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ರಾಜ್ಯಾಧ್ಯಕ್ಷರಾಗಿ ಇದ್ದರೆ ಪಕ್ಷ ನಿರ್ನಾಮವಾಗಲಿದೆ ಎಂದು ಕಾಂಗ್ರೆಸ್ಸಿಗರು ಹೇಳಿರುವುದು ತಡವಾಗಿಯಾದರೂ ಜ್ಞಾನೋದಯವಾದಂತಾಗಿದೆ ಎಂದು ಕಟೀಲ್ ವ್ಯಂಗ್ಯ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕುಳಿತು ಸತ್ಯ ಹೇಳಿರುವ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳು. ನಿಮ್ಮ ಮಾತುಗಳನ್ನು ಜನರಿಗೆ ತಲುಪಿಸಿರುವ ಮಾಧ್ಯಮಗಳಿಗೆ ಅಭಿನಂದನೆ ಎಂದು ಕಟೀಲ್ ಟ್ವೀಟ್ ಮಾಡಿದ್ಧಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


