ತೈಲ ಬೆಲೆ ಸತತ ಏರಿಕೆ: ಬಿಜೆಪಿ ಸರ್ಕಾರದ ವಿರುದ್ಧ ಸುರ್ಜೇವಾಲಾ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದರ ಏರಿಕೆ ನಿಯಂತ್ರಿಸುತ್ತಿಲ್ಲ. ಹೀಗಾಗಿ, ದೇಶದ ಶ್ರೀಸಾಮಾನ್ಯರಿಗೆ ದುಬಾರಿಯಾಗುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕಿಡಿಕಾರಿದ್ದಾರೆ.

ಹಾವೇರಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದರ ಏರಿಕೆ ನಿಯಂತ್ರಿಸುತ್ತಿಲ್ಲ. ಹೀಗಾಗಿ, ದೇಶದ ಶ್ರೀಸಾಮಾನ್ಯರಿಗೆ ದುಬಾರಿಯಾಗುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕಿಡಿಕಾರಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿ ಮಾತನಾಡಿದ ಅವರು, ಬೆಲೆ ಏರಿಕೆ ವಿಚಾರವಾಗಿ ಜನರು ನಿತ್ಯ ದೇವರಲ್ಲಿ ಬೇಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಜನರು ಇಂದು ತಮ್ಮ ಬೈಕ್ ಮತ್ತು ಕಾರ್‌ಗಳನ್ನು ಎಲ್ಲಿಯೂ ನಿಲ್ಲಿಸದೇ ಸಕಾಲಕ್ಕೆ ಮನೆ ಸೇರಿಸು ಎಂದು ದೇವರನ್ನು ಪ್ರಾರ್ಥಿಸಿಕೊಳ್ಳುವ ಹಂತಕ್ಕೆ ತಲುಪಿದ್ದಾರೆ.
ಜನರನ್ನು ಕೇಂದ್ರದ ಬಿಜೆಪಿ ಸರ್ಕಾರ ಈ ಸ್ಥಿತಿಗೆ ತಂದಿಟ್ಟಿದೆ ಎಂದು ಸುರ್ಜೆವಾಲಾ ಹೇಳಿದರು.
ಕಳೆದ 25 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಎಂದಾದರೂ ರೇಷನ್ ಖರೀದಿಸಿದ್ದರೆ ಇಂದು ಶ್ರೀಸಾಮಾನ್ಯರು ಅನುಭವಿಸುತ್ತಿರುವ ನೋವು - ಸಂಕಟದ ಅರಿವು ಅವರಿಗೆ ತಿಳಿಯುತ್ತಿತ್ತು ಎಂದು ಸುರ್ಜೇವಾಲಾ ಟೀಕಿಸಿದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಾತನಾಡಿ, ಉಪ ಚುನಾವಣೆ ಪ್ರಚಾರ ಕಣದಲ್ಲಿ ಸಿಎಂ ಮತ್ತು ಬಿಜೆಪಿ ನಾಯಕರಿಗೆ ಹೇಳಿಕೊಳ್ಳುವುದಕ್ಕೆ ತಮ್ಮ ಸಾಧನೆಗಳೇ ಸಿಗುತ್ತಿಲ್ಲ ಎಂದರು. ಇದೇ ಕಾರಣಕ್ಕಾಗಿ ನಮ್ಮ ಪಕ್ಷದ ನಾಯಕರ ವಿರುದ್ಧ ಲಘುವಾಗಿ ಮಾತನಾಡುವ ಮೂಲಕ ಜನರನ್ನು ರಂಜಿಸುತ್ತಿದ್ದಾರೆ ಎಂದು ಡಿಕೆಶಿ ಹರಿಹಾಯ್ದರು. ಚುನಾವಣೆ ಸಂದರ್ಭದಲ್ಲಿ ಜನರಿಗೆ ಆಗಿರುವ ನೋವು, ಅವುಗಳಿಗೆ ಪರಿಹಾರ ನೀಡುವ ಕುರಿತು ಮಾತನಾಡಿ ಮತ ಕೇಳಬೇಕೇ ವಿನಃ ತೇಜೋವಧೆ ಮಾಡುವ ಬಿಜೆಪಿ ಸಂಸ್ಕೃತಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಡಿಕೆಶಿವಕುಮಾರ್ ಹೇಳಿದರು.
ಚುನಾವಣಾ ಉಸ್ತುವಾರಿ ಸಮಿತಿ ಅಧ್ಯಕ್ಷ ಎಚ್. ಕೆ. ಪಾಟೀಲ ಮಾತನಾಡಿ, ನಮ್ಮ ಪಕ್ಷದ ರಾಷ್ಟ್ರ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ನೀಡಿರುವ ಹೇಳಿಕೆ ನಿಜಕ್ಕೂ ಅವರ ಸಂಸ್ಕಾರ ಮತ್ತು ವಿಕೃತ ಮನಸ್ಥಿತಿಗೆ ಸಾಕ್ಷಿಯಾಗಿದೆ. ಈ ದೇಶಕ್ಕೆ ಗಾಂಧಿ ಕುಟುಂಬದ ತ್ಯಾಗದ ಶೇಕಡಾ ಒಂದು ಪರ್ಸಂಟ್ ಸಹ ಬಿಜೆಪಿ ಇಲ್ಲ ಎಂದರು.
ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುವುದನ್ನೇ ಸಾಧನೆ ಎಂದು ಬಿಂಬಿಸುವ ಬದಲು ಜನರ ಬದುಕನ್ನು ಕೇಂದ್ರ ಮತ್ತು ರಾಜ್ಯ ಸರಕಾರ ಹೇಗೆ ಬದಲಾವಣೆ ಮಾಡಿದೆ ಎನ್ನುವ ಮೂಲಕ ಮತ ಕೇಳಲಿ ಎಂದ ಕಿವಿ ಮಾತು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


