ದುಡ್ಡು ಕೊಟ್ಟಲ್ಲ, ನಾವು ಜನರ ಮನಸ್ಸು ಗೆಲ್ಲುವ ಮೂಲಕ ಉಪಚುನಾವಣೆ ಗೆಲ್ಲುತ್ತೇವೆ: ಸಿದ್ಧುಗೆ ಬೊಮ್ಮಾಯಿ ತಿರುಗೇಟು
ಕಾಂಗ್ರೆಸ್ ನಾಯಕರು ವಾಸ್ತವತೆಯನ್ನು ಅರ್ಥ ಮಾಡಿಕೊಳ್ಳದೆ ವಾದ ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಆದರೆ ನಾವು ವಾದ ಮಾಡದೆ ಜನರ ಮನಸ್ಸನ್ನು ಗೆಲ್ಲುವ ಮೂಲಕ ಉಪ ಚುನಾವಣೆಯನ್ಮು ಗೆಲ್ಲುತ್ತೇವೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹಾನಗಲ್: ಕಾಂಗ್ರೆಸ್ ನಾಯಕರು ವಾಸ್ತವತೆಯನ್ನು ಅರ್ಥ ಮಾಡಿಕೊಳ್ಳದೆ ವಾದ ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಆದರೆ ನಾವು ವಾದ ಮಾಡದೆ ಜನರ ಮನಸ್ಸನ್ನು ಗೆಲ್ಲುವ ಮೂಲಕ ಉಪ ಚುನಾವಣೆಯನ್ಮು ಗೆಲ್ಲುತ್ತೇವೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಮುಖಂಡರು ಚುನಾವಣಾ ಪ್ರಚಾರದಲ್ಲಿ ನಡೆಸುತ್ತಿರುವ ವಾಕ್ಸಮರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ವಾದವನ್ನು ಮಾಡದೆ ಜನರ ಮನಸ್ಸನ್ನು ಗೆಲ್ಲುವ ಪ್ರಯತ್ನ ಮಾಡುತ್ತಿದ್ದೇವೆ. ಹಾನಗಲ್ ಹಾಗೂ ಸಿಂದಗಿಯಲ್ಲಿ ಜನರ ಪ್ರೀತಿ ವಿಶ್ವಾಸ ಹಾಗೂ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ನಾವು ಚುನಾವಣೆ ಎದುರಿಸುತ್ತಿದ್ದೇವೆ. ಅದೇ ನಮಗೆ ಶಕ್ತಿ ಎಂದರು.
ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಉತ್ತರ ಕರ್ನಾಟಕದ ಬಗ್ಗೆ ಇರದ ಕಾಳಜಿ ಈಗ ತೋರಿಸುತ್ತಿದ್ದಾರೆ. ಇವರ ಬಣ್ಣದ ಮಾತುಗಳಿಗೆ ಜನ ಮರುಳಾಗಬಾರದೆಂದು ತಿರ್ಮಾನ ಮಾಡಿದ್ದಾರೆ. ವಾಸ್ತವತೆಯನ್ನು ಕಾಂಗ್ರೆಸ್ ಅರ್ಥಮಾಡಿಕೊಳ್ಳದೆ ವ್ಯರ್ಥವಾಗಿ ವಾದ ಮಾಡುತ್ತಿದೆ ಎಂದರು.
ಉಪಚುನಾವಣೆಗೋಸ್ಕರ ಬಿಜೆಪಿ ಬಹಳಷ್ಟು ಹಣವನ್ನು ಖರ್ಚು ಮಾಡುತ್ತಿದೆ. ಇನ್ನು ಪ್ರತಿ ಓಟಿಗೆ 2,000 ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


