ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ: ಸಿದ್ದರಾಮಯ್ಯ
ಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ, ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಮತ ಹಾಕಲಿದ್ದಾರೆ. ಹಾಗಾಗಿ ಗೆಲುವು ನಮ್ಮದೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೊರಬ: ಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ, ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಮತ ಹಾಕಲಿದ್ದಾರೆ. ಹಾಗಾಗಿ ಗೆಲುವು ನಮ್ಮದೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಇಂದು ಬೆಳಗ್ಗೆ ಮಾತನಾಡಿದ ಅವರು, ಬಿಜೆಪಿ ಸತತವಾಗಿ ಜನಪರ ಕೆಲಸಗಳಲ್ಲಿ ವಿಫಲವಾಗುತ್ತಾ ಬಂದಿದೆ. ಅದು ಕೇಂದ್ರದ ಮೋದಿ ಸರ್ಕಾರವಾಗಲಿ, ಇಲ್ಲಿ ರಾಜ್ಯದಲ್ಲಾಗಲಿ ಬೆಲೆ ಏರಿಕೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಸತತ ವೈಫಲ್ಯ ಕಾಣುತ್ತಾ ಬಂದಿದೆ. ಮೋದಿಯವರು ಸುಳ್ಳಿನ ಮೂಲಕ ಜನರಲ್ಲಿ ಭ್ರಮೆಯನ್ನು ಸೃಷ್ಟಿಸಿದ್ದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಜನರಿಗೆ ಬಿಜೆಪಿಯ ನಿಜರೂಪ ಗೊತ್ತಾಗುತ್ತಿದೆ ಎಂದು ಟೀಕಿಸಿದರು.
ನಮ್ಮ ಸರ್ಕಾರವಿದ್ದಾಗ ಜಾರಿಗೆ ತಂದಿದ್ದ ಕಾರ್ಯಕ್ರಮಗಳ ಬಗ್ಗೆ ಜನ ಈಗಲೂ ಮಾತನಾಡುತ್ತಿದ್ದಾರೆ, ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಜನ ನೆನಪು ಮಾಡಿಕೊಳ್ಳುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ನಮ್ಮ ಪಕ್ಷಕ್ಕೆ ವರವಾಗಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೈಗೆ ಗೆಲುವು ಖಚಿತ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


