ರಾಜಕೀಯ

ಸಿದ್ದರಾಮಯ್ಯ ಅವರನ್ನು ತಕ್ಷಣವೇ ಅಫ್ಗಾನಿಸ್ತಾನಕ್ಕೆ ಕಳುಹಿಸಬೇಕು: ಶ್ರೀನಿವಾಸ್ ಪ್ರಸಾದ್

ತಾಲಿಬಾನ್ ಆಡಳಿತ ಹೇಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ.

ಸಿದ್ದರಾಮಯ್ಯ ಅವರನ್ನು ತಕ್ಷಣವೇ ಅಫ್ಗಾನಿಸ್ತಾನಕ್ಕೆ ಕಳುಹಿಸಬೇಕು: ಶ್ರೀನಿವಾಸ್ ಪ್ರಸಾದ್
ಶ್ರೀನಿವಾಸ್ ಪ್ರಸಾದ್
Published On :

ಮೈಸೂರು: ತಾಲಿಬಾನ್ ಆಡಳಿತ ಹೇಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ತಕ್ಷಣವೇ ಕಳುಹಿಸಿ ಕೊಡಬೇಕಾಗಿದೆ' ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ ನೀಡಿದರು.


ಮೈಸೂರಿನಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಅಸಂಬ್ಲಿ ಉಪ ಚುನಾವಣೆಯಲ್ಲಿ ರಾಜ್ಯ ನಾಯಕರ ಮಾತು ಮಿತಿ ಮೀರಿದೆ. ನಾನು ನಿಮ್ಮ ರೀತಿ ಪೇಪರ್ ಹಾಗೂ ಟಿವಿ ಮಾಧ್ಯಮಗಳಲ್ಲಿ ನೋಡಿದ್ದೇನೆ. ನಾನು ಚುನಾವಣಾ ಕ್ಷೇತ್ರಗಳಿಗೆ ಹೋಗಿಲ್ಲ. ಚುನಾವಣೆಯಲ್ಲಿ ನಾವು ಎರಡೂ ಕ್ಷೇತ್ರವನ್ನ ಗೆಲ್ಲುತ್ತೇವೆ ಎಂದು ಶ್ರೀನಿವಾಸ್ ಪ್ರಸಾದ್ ಹಾಲಿ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.