ಉಪಚುನಾವಣೆಯ ಬಿಜೆಪಿ ಪ್ರಣಾಳಿಕೆ ಅರ್ಥಹೀನವಾದದ್ದು: ಡಿಕೆ.ಶಿವಕುಮಾರ್
ಹಾನಗಲ್ ಉಪಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಅರ್ಥಹೀನವಾದದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ.

ಹಾನಗಲ್: ಹಾನಗಲ್ ಉಪಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಅರ್ಥಹೀನವಾದದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ.
ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ವಿ ಮಾನೆ ಪರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿಯವರ ಪ್ರಣಾಳಿಕೆಯೇ ಅರ್ಥಹೀನವಾದದ್ದು. ಪ್ರಣಾಳಿಕೆಯಲ್ಲಿ ಮೂರ್ಖತನದ ವಿಚಾರಗಳೇ ಇವೆ. ಕ್ಷೇತ್ರದ ನಿವಾಸಿಗಳಿಗೆ ಮೂಲಭೂತ ಅಗತ್ಯಗಳನ್ನು ಒದಗಿಸುವಲ್ಲಿ ಡಬಲ್ ಎಂಜಿನ್ ಸರ್ಕಾರ ಇದುವರೆಗೆ ವಿಫಲವಾಗಿದೆ ಎಂದು ಹೇಳಿದ್ದಾರೆ.
ಬಳಿಕ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿರುವುದರಿಂದ ಜನರು ಸಾಮಾನ್ಯ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ ಮತ್ತು ಬೆಲೆಗಳನ್ನು ನಿಯಂತ್ರಣಕ್ಕೆ ತರಲು ಸರ್ಕಾರಗಳು ವಿಫಲವಾಗಿವೆ ಎಂದು ತಿಳಿಸಿದ್ದಾರೆ.
ಈ ಬಾರಿ ಬಿಜೆಪಿಗೆ ಜನರು ಪಾಠ ಕಲಿಸುತ್ತಾರೆ, ಬಿಜೆಪಿ ಸಚಿವರು ಮತ್ತು ಸಿಎಂಗಳು ವಿಧಾನಸೌಧಕ್ಕೆ ಬೀಗ ಹಾಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಹಾನಗಲ್ ಹಾಗೂ ಸಿಂಗದಿಯಲ್ಲಿ ಬೀಡುಬಿಟ್ಟಿದ್ದಾರೆಂದು ವ್ಯಂಗ್ಯವಾಡಿದ್ದಾರೆ.
ಮಹಿಳೆಯರ ಸುರಕ್ಷತೆಯು ಕಾಳಜಿಯ ವಿಷಯವಾಗಿದೆ. “ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿಯಲ್ಲಿ ಮಹಿಳೆಯರು ಏಕಾಂಗಿಯಾಗಿ ಪೊಲೀಸ್ ಠಾಣೆಗೆ ಹೋಗುವಂತಿಲ್ಲ. ಕರ್ನಾಟಕದಲ್ಲಿ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ಸರ್ಕಾರ ಮತ್ತು ಅದರ ನಾಯಕರು ದೇಶದ ಮಹಿಳೆಯರು ಮತ್ತು ರೈತರನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


