ಕನ್ನಡವನ್ನು ಅಪಮಾನಿಸುವ ಎಂಇಎಸ್ ಪುಂಡರಿಗೆ ತಕ್ಕ ಶಾಸ್ತಿ ಮಾಡಿ: ಸರ್ಕಾರಕ್ಕೆ ಹೆಚ್.ಡಿ. ಕುಮಾರಸ್ವಾಮಿ
ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್ಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು: ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್ಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಕುಂದಾನಗರಿಯ ಪ್ರತಿಷ್ಠೆಗೆ ಧಕ್ಕೆ ತಂದು ಅಲ್ಲಿನ ಸೌಹಾರ್ದ ವಾತಾವರಣವನ್ನು ಹಾಳು ಮಾಡುತ್ತಿರುವ ಎಂಇಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ರಾಜಕೀಯವಾಗಿ ಮೂಲೆಗುಂಪಾಗಿರುವ ಎಂಇಎಸ್, ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟು ಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾ ನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರಿಗಿದೆ.
ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ. ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ನಾನು ಸರಕಾರವನ್ನು ಒತ್ತಾಯ ಮಾಡುತ್ತೇನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


