ದೇಶವನ್ನು ಖಾಸಗಿಯವರಿಗೆ ಮಾರಲು ಬಿಜೆಪಿ ಹುನ್ನಾರ: ಸಚಿನ್ ಪೈಲಟ್
ದೇಶದ ಜನರ ತೆರಿಗೆ ಹಣದಲ್ಲಿ ನಿರ್ಮಿಸಲಾದ ಸರ್ಕಾರದ ಆಸ್ತಿಗಳನ್ನು ಮೋದಿ ಸರ್ಕಾರ ಖಾಸಗಿಯವರ ಕೈಗಿಡುವ ಮೂಲಕ ದೇಶವನ್ನು ಮಾರಾಟ ಮಾಡುವ ಹುನ್ನಾರ ಮಾಡುತ್ತಿದೆ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

ಬೆಂಗಳೂರು: ದೇಶದ ಜನರ ತೆರಿಗೆ ಹಣದಲ್ಲಿ ನಿರ್ಮಿಸಲಾದ ಸರ್ಕಾರದ ಆಸ್ತಿಗಳನ್ನು ಮೋದಿ ಸರ್ಕಾರ ಖಾಸಗಿಯವರ ಕೈಗಿಡುವ ಮೂಲಕ ದೇಶವನ್ನು ಮಾರಾಟ ಮಾಡುವ ಹುನ್ನಾರ ಮಾಡುತ್ತಿದೆ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಕಚೇರಿಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಯುವ ನಾಯಕ ಸಚಿನ್ ಪೈಲಟ್, ಮೋದಿ ಸರ್ಕಾರದ ರೀತಿ ನೀತಿಗಳನ್ನು ಬಲವಾಗಿ ಟೀಕಿಸಿದರು. ಸರ್ಕಾರದ ಈ ಕ್ರಮ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಹೋರಾಟ ನಡೆಸಲಿದೆ ಎಂದು ಗುಡುಗಿದರು.
ರಸ್ತೆ, ಹೆದ್ದಾರಿ, ಗ್ಯಾಸ್ ಪೈಪ್ ಲೈನ್, ಆಹಾರ ದಾಸ್ತಾನು, ಟೆಲಿಫೋನ್ ಸಂಪರ್ಕ, ಬಂದರು, ವಿಮಾನ ನಿಲ್ದಾಣ, ರಾಷ್ಟ್ರೀಯ ಕ್ರೀಡಾಂಗಣ ಹಾಗೂ ರೈಲ್ವೆಯನ್ನು ಕಳೆದ 6 ದಶಕಗಳಿಂದ ತೆರಿಗೆದಾರರ ಬೆವರಿನ ಹಣದಲ್ಲಿ ನಿರ್ಮಿಸಲಾಗಿದ್ದು, ಇವುಗಳನ್ನು ಖಾಸಗೀಕರಣ ಮಾಡಲು ಬಿಜೆಪಿ ಹೊರಟಿದೆ ಎಂದು ದೂರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


