ರಾಜಕೀಯ

ಎನ್‌ಇಪಿ ಎಂದರೆ ನಾಗ್ಪುರ ಶಿಕ್ಷಣ ನೀತಿ: ಡಿ.ಕೆ. ಶಿವಕುಮಾರ್

ಎನ್‌ಇಪಿ ಎಂದರೆ ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎನ್‌ಇಪಿ ಎಂದರೆ ನಾಗ್ಪುರ ಶಿಕ್ಷಣ ನೀತಿ: ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್‌
Published On :

ಬೆಂಗಳೂರು: ಎನ್‌ಇಪಿ ಎಂದರೆ ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ, ಅದು ನಾಗ್ಪುರ ಶಿಕ್ಷಣ ನೀತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದರೆ ಅದರ ಬಗ್ಗೆ ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆ ಆಗಬೇಕು. ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್‌ ನಲ್ಲಿ ಚರ್ಚಿಸಬೇಕು. ಆದರೆ ಅದ್ಯಾವುದು ನಡೆದಿಲ್ಲ. ಸದನ ಸಮಿತಿ ರಚಿಸಿ, ರಾಜ್ಯದುದ್ದಗಲಕ್ಕೂ ಜನರ ಜತೆ ಚರ್ಚಿಸಿ, ಅಭಿಪ್ರಾಯ ಪಡೆಯುವವರೆಗೂ ರಾಜ್ಯದಲ್ಲಿ ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ ಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವುದರ ವಿರುದ್ಧ ಕಾಂಗ್ರೆಸ್‌ ಪಕ್ಷ ಹೋರಾಟ ಮಾಡಲಿದೆ. ಏನೇ ತಿಪ್ಪರಲಾಗ ಹಾಕಿದರೂ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗದೇ ಇದನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದೂ ಹೇಳಿದ್ದಾರೆ.

ನಾನು ಕೂಡ ಶಿಕ್ಷಣ ಕ್ಷೇತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದು, ವಿದ್ಯಾಸಂಸ್ಥೆಗಳನ್ನು ನಡೆಸುತ್ತಾ ಬಂದಿದ್ದೇನೆ. ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿದ್ದೇನೆ. ಈ ನೂತನ ಶಿಕ್ಷಣ ನೀತಿ ಏನು, ಅದರಿಂದ ಆಗುವ ಪ್ರಯೋಜನೆಗಳೇನು? ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನಿಂದಲೇ ಸಾಧ್ಯವಾಗುತ್ತಿಲ್ಲ.

ಶಿಕ್ಷಣ ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಿಸಬೇಕು ನಿಜ. ಆದರೆ ಅದರ ಬಗ್ಗೆ ಎಲ್ಲ ಕಡೆಗಳಲ್ಲೂ ವ್ಯಾಪಕ ಚರ್ಚೆ ಆಗಬೇಕಲ್ಲವೇ? ಚರ್ಚೆಯೇ ನಡೆಯದೇ, ಏಕಾಏಕಿ ಈ ನೀತಿ ಜಾರಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡಿರುವುದರಿಂದ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಎಲ್ಲರೂ ಗಾಬರಿ ಬಿದ್ದಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಈ ನೀತಿ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್‌, ಶಿಕ್ಷಣ ಸಂಸ್ಥೆಗಳು, ಪೋಷಕರು, ಶಿಕ್ಷಕರ ಮಟ್ಟದಲ್ಲಿ ಸಂಪೂರ್ಣವಾಗಿ ಚರ್ಚೆಯಾಗುವವರೆಗೂ ಈ ನೀತಿ ಜಾರಿಯನ್ನು ತಡೆ ಹಿಡಿಯಬೇಕು. ಅಲ್ಲಿಯವರೆಗೂ ನಾವು ಕೂಡ ಇದನ್ನು ವಿರೋಧಿಸುತ್ತೇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.