ರಾಜಕೀಯ

'ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಇಸ್ಪೀಟ್ ಕಾರ್ಡ್‌ಗಳ ಮನೆಯಂತೆ ಮುರಿದುಬೀಳಲಿದೆʼ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶದ (ಯುಪಿ) ಬಿಜೆಪಿಯು ಕುಸಿಯಲಿದೆ ಎಂದು ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ.

'ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಇಸ್ಪೀಟ್ ಕಾರ್ಡ್‌ಗಳ ಮನೆಯಂತೆ ಮುರಿದುಬೀಳಲಿದೆʼ
ಯೋಗಿ ಆದಿತ್ಯನಾಥ್
Published On :

ಬೆಂಗಳೂರು: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶದ (ಯುಪಿ) ಬಿಜೆಪಿಯು ಕುಸಿಯಲಿದೆ ಎಂದು ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. 

ಮಾಧ್ಯಮದವರೊಂದಿಗೆ ಮಾತನಾಡಿದ ವೀರಪ್ಪ ಮೊಯ್ಲಿ, ಉತ್ತರ ಪ್ರದೇಶದಲ್ಲಿ ಬಲಿಷ್ಠವಾಗಿರುವುದಾಗಿ ಬಿಜೆಪಿ‌ ಭಾವಿಸಿದೆ. ಆದರೆ, ನೋಟುರದ್ದತಿ ಮತ್ತು ಜಿಎಸ್‌ಟಿ ಜಾರಿಯಂತಹ ಕೇಂದ್ರ ಸರ್ಕಾರದ ಯೋಜನೆಗಳಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇದರಿಂದಾಗಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಇಸ್ಪೀಟ್ ಕಾರ್ಡ್‌ಗಳ ಮನೆಯಂತೆ ಮುರಿದುಬೀಳಲಿದೆʼ ಎಂದಿದ್ದಾರೆ.  

ಕೇವಲ ಘೋಷಣೆಗಳಿಂದ ಜನರನ್ನು ಸೆಳೆಯಲು ಅಥವಾ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಆ ಕಾರ್ಯವನ್ನು ಒಮ್ಮೆ ಮಾಡಬಹುದು ಯಾವಾಗಲೂ ಅಲ್ಲ ಎಂದು ಬಿಜೆಪಿ ವಿರುದ್ದ ಟೀಕೆಗಳ ಸುರಿಮಳೆಗೈದಿದ್ದಾರೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.  ಜನತೆ ಪ್ರಿಯಾಂಕಾ ಅವರಲ್ಲಿ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಕಾಣುತ್ತಿದ್ದಾರೆ ಎಂದರು. ರಾಜ್ಯದ ಜನರು ಪ್ರಿಯಾಂಕಾಗೆ ಮುಖ್ಯಮಂತ್ರಿ ಆದಿತ್ಯನಾಥ ಅವರಿಗಿಂತಲೂ ಹೆಚ್ಚಿನ ಆದ್ಯತೆ ನೀಡಲಿದ್ದಾರೆʼ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.