ರಾಜಕೀಯ

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲು: ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೋನರೆಡ್ಡಿ ರಾಜೀನಾಮೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಚುನಾವಣಾ ಉಸ್ತುವಾರಿಯೂ ಆಗಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲು: ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೋನರೆಡ್ಡಿ ರಾಜೀನಾಮೆ
ಕೋನ ರೆಡ್ಡಿ
Published On :

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಚುನಾವಣಾ ಉಸ್ತುವಾರಿಯೂ ಆಗಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 

2013ನೇ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ 9 ಸ್ಥಾನಗಳನ್ನು ಗಳಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಒಂದು ಸ್ಥಾನವಷ್ಟೇ ಪಡೆದಿದೆ. ತಮ್ಮ ರಾಜೀನಾಮೆ ಕುರಿತು ಕೋನರಡ್ಡಿ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ಪತ್ರ ರವಾನಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಪರಿಶ್ರಮ ಪಟ್ಟಿದ್ದೆ. ಕನಿಷ್ಠ 10 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೆವು. ಆದರೆ ಇತ್ತೀಚಿನ ಚುನಾವಣಾ ಕಾರ್ಯವೈಖರಿಯಿಂದ ಬೇಸತ್ತು ತಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದರು.

ನಮ್ಮ ಪಕ್ಷದ ಅಭ್ಯರ್ಥಿ 25ನೇ ವಾರ್ಡ್​​​ನ ಲಕ್ಷ್ಮಿ ಹಿಂಡಸಗೇರಿ ಗೆಲುವು ಸಾಧಿಸಿದ್ದಾರೆ. 2ನೇ, 3ನೇ ಸ್ಥಾನದಲ್ಲಿ ಮೂವರು ಅಭ್ಯರ್ಥಿಗಳು ಬಂದು, ಕೆಲವೇ ಮತಗಳಿಂದ ಸೋಲು‌ ಕಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವುದಕ್ಕೆ ನಮ್ಮ ಯಾವುದೇ ಪಾತ್ರವಿಲ್ಲ. ಆದ್ರೆ ಕಲಬುರಗಿ ಪಾಲಿಕೆಯಲ್ಲಿ ನಮ್ಮ ಪಕ್ಷ ನಿರ್ಣಾಯಕವಾಗಿದೆ. ನಮ್ಮ
ನಾಯಕರಾದ ಹೆಚ್​ ಡಿ ಕುಮಾರಸ್ವಾಮಿ ಸೂಕ್ತ ನಿರ್ಧಾರ ತಗೆದುಕೊಳ್ಳಲಿದ್ದಾರೆ ಎಂದು ಕೋನರೆಡ್ಡಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.