ಸಮನ್ವಯತೆ ಕೊರತೆಯಿಂದ ಬೆಳಗಾವಿ ಪಾಲಿಕೆಯಲ್ಲಿ ಕಡಿಮೆ ಸ್ಥಾನ: ಸತೀಶ್ ಜಾರಕಿಹೊಳಿ
ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿ ಎರಡು ಬಣಗಳು ಇರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿ ಎರಡು ಬಣಗಳು ಇರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ.. ಪಕ್ಷದಲ್ಲಿ ಬಣಗಳ ಮೇಲಾಟ ನಡೆದಿದ್ದರಿಂದ ಹಿನ್ನಡೆ ಕಾಣಬೇಕಾಯಿತು ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಹೊಂದಾಣಿಕೆ ಕೊರತೆಯ ಕಾರಣ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣದಲ್ಲಿ 3, ಉತ್ತರದಲ್ಲಿ 5 ಕ್ಷೇತ್ರ ಕಳೆದುಕೊಳ್ಳಬೇಕಾಯಿತು ಎಂದರು. ಬೆಳಗಾವಿ ಕಾಂಗ್ರೆಸ್ ಘಟಕದಲ್ಲಿ ಮೂರು ಬಣಗಳು ಇಲ್ಲ. ಇರುವುದು ಎರಡೇ ಬಣ. ಉತ್ತರ ಕ್ಷೇತ್ರ, ದಕ್ಷಿಣ ಕ್ಷೇತ್ರಕ್ಕೆ ಹೊಂದಾಣಿಕೆ ಆಗುತ್ತಿಲ್ಲ. ಉತ್ತರ ಧ್ರುವದಿಂ ದಕ್ಷಿಣ ಧ್ರುವಕು ಎಂಬಂತೆ ಕೆಲವರೊಂದಿಗೆ ಸಹಯೋಗದ ಕೆಲಸ ಸಾಧ್ಯವಾಗುತ್ತಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡರು.
ಪಕ್ಷವು ಕನಿಷ್ಠ 20-25 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು, ಆದರೆ ಕೇವಲ 10 ಸ್ಥಾನದಲ್ಲಿ ಗೆಲುವು ಸಾಧಿಸಿದ್ದೇವೆ. ಐದು ಸ್ವತಂತ್ರರು ಕಾಂಗ್ರೆಸ್ ಪಕ್ಷದೊಂದಿಗೆ ಇದ್ದಾರೆ ಎಂದು ಅವರು ಹೇಳಿದರು. ಪ್ರತಿ ವಾರ್ಡ್‌ನಲ್ಲಿ 3-4 ಎಂಇಎಸ್ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿದ್ದು ಬಿಜೆಪಿಗೆ ಲಾಭವಾಗಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


