ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಕಸರತ್ತು: ಎಚ್ ಡಿಕೆ, ಅಶೋಕ್ ಭೇಟಿ; ಸೋಮವಾರ ಜೆಡಿಎಸ್ ಶಾಸಕಾಂಗ ಸಭೆ
ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿಗೆ ಮುಂದಾಗಿರುವಂತೆಯೇ, ಕಂದಾಯ ಸಚಿವ ಆರ್, ಅಶೋಕ್ ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಮನಗರ: ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿಗೆ ಮುಂದಾಗಿರುವಂತೆಯೇ, ಕಂದಾಯ ಸಚಿವ ಆರ್, ಅಶೋಕ್ ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ ನಮ್ಮ ಶಾಸಕರ ಜೊತೆ ಎಲ್ಲ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅಶೋಕ್ ಅವರಿಗೆ ಹೇಳಿರುವುದಾಗಿ ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದ ರೈತಾಪಿ ಜನ ಎದುರಿಸುತ್ತಿರುವ ಸಮಸ್ಯೆಗಳೂ ಸೇರಿದಂತೆ ರಾಜ್ಯ ಎದುರಿಸುತ್ತಿರುವ ವಿವಿಧ ಸವಾಲುಗಳ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದೇನೆ. ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಸಮಾಲೋಚಿಸಿರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


