ರಾಜಕೀಯ

ಬಿಜೆಪಿಯಿಂದ ಹಣದ ಆಫರ್‌ ಹೇಳಿಕೆ: ಶ್ರೀಮಂತ ಪಾಟೀಲ್‌ ಯೂಟರ್ನ್!

ಬಿಜೆಪಿ ಸೇರುವಾಗ ನನಗೆ ಹಣದ ಆಫರ್‌ ಬಂದಿತ್ತು. ಆದರೆ, ನಾನು ಒಳ್ಳೆಯ ಸ್ಥಾನಮಾನ ಕೇಳಿದ್ದೆ’ ಎಂದು ಹೇಳಿದ್ದ ಮಾಜಿ ಸಚಿವ ಶ್ರೀಮಂತ ಪಾಟೀಲ್‌ ಅವರು ಇದೀಗ ಯೂಟರ್ನ್ ಹೊಡೆದಿದ್ದಾರೆ.

ಬಿಜೆಪಿಯಿಂದ ಹಣದ ಆಫರ್‌ ಹೇಳಿಕೆ: ಶ್ರೀಮಂತ ಪಾಟೀಲ್‌ ಯೂಟರ್ನ್!
ಶ್ರೀಮಂತ ಪಾಟೀಲ್‌
Published On :

ಬೆಳಗಾವಿ: ಬಿಜೆಪಿ ಸೇರುವಾಗ ನನಗೆ ಹಣದ ಆಫರ್‌ ಬಂದಿತ್ತು. ಆದರೆ, ನಾನು ಒಳ್ಳೆಯ ಸ್ಥಾನಮಾನ ಕೇಳಿದ್ದೆ’ ಎಂದು ಹೇಳಿದ್ದ ಮಾಜಿ ಸಚಿವ ಶ್ರೀಮಂತ ಪಾಟೀಲ್‌ ಅವರು ಇದೀಗ ಯೂಟರ್ನ್ ಹೊಡೆದಿದ್ದಾರೆ.

ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಅಪೇಕ್ಷೆ ಇಲ್ಲದೆ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಸರ್ಕಾರ ರಚನೆಯಾದ ನಂತರ ಸೂಕ್ತ ಸ್ಥಾನಕ್ಕಾಗಿ ಮಾತ್ರ ಬೇಡಿಕೆ ಇಟ್ಟಿದ್ದೆ. ಮೊನ್ನೆ ನಾನು ನೀಡಿದ ಹೇಳಿಕೆ ತಪ್ಪಾಗಿದೆ ಎಂದು ಹೇಳಿದ್ದಾರೆ. 

ಬಿಜೆಪಿಯಿಂದ ನನಗೆ ಹಣದ ಆಫರ್‌ ಇರಲಿಲ್ಲ. ಪ್ರಧಾನಿ ಮೋದಿ ಅವರ ಆಡಳಿತ ಮತ್ತು ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ನನಗೆ ಸಚಿವ ಸ್ಥಾನ ಸಿಗುವ ಭರವಸೆ ಇತ್ತು. ಆದರೆ, ಸಿಕ್ಕಿಲ್ಲ. ಎಲ್ಲ ಜನಾಂಗದವರು ನನಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮರಾಠಾ ಜನರು ಬಿಜೆಪಿಗೆ ಬೆಂಬಲ ನೀಡಿ ಅಭೂತ ಪೂರ್ವ ಗೆಲುವು ನೀಡಿದ್ದಾರೆ’ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.