ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರಾಗಿ ಸತೀಶ್ ರೆಡ್ಡಿ ನೇಮಕ
ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಅವರನ್ನು ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರಿಂದ ಅವರಿಗಿದ್ದ ವಿಧಾನಸಭೆ ಮುಖ್ಯ ಸಚೇತಕ ಸ್ಥಾನ ತೆರವಾಗಿತ್ತು.

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಅವರನ್ನು ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರಿಂದ ಅವರಿಗಿದ್ದ ವಿಧಾನಸಭೆ ಮುಖ್ಯ ಸಚೇತಕ ಸ್ಥಾನ ತೆರವಾಗಿತ್ತು.
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಉಸ್ತುವಾರಿ ವಹಿಸಿಕೊಂಡು ಮೊದಲ ಬಾರಿಗೆ ಪಾಲಿಕೆ ಕಮಲ ಪಾಲಾಗುವಂತೆ ಮಾಡಿದ್ದ ಶಾಸಕ ಸತೀಶ್ ರೆಡ್ಡಿಗೆ ಬಿಜೆಪಿ ನಾಯಕರು ವಿಧಾನಸಭೆ ಮುಖ್ಯ ಸಚೇತಕ ಹುದ್ದೆ ನೀಡಿ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ಸಚಿವ ಸ್ಥಾನದ ಮೇಲೆ ನಿರೀಕ್ಷೆಯಿಟ್ಟಿದ್ದ ಸತೀಶ್ ರೆಡ್ಡಿಗೆ ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡುವ ಮೂಲಕ ಅವರಿಗಿದ್ದ ಅಸಮಾಧಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಮನ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


