ಹಣದ ಆಮಿಷ ಕುರಿತ ಹೇಳಿಕೆ: ಶ್ರೀಮಂತ ಪಾಟೀಲ್ ಜೊತೆ ಮಾತನಾಡುತ್ತೇನೆಂದ ಸವದಿ
ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಯಾರು ಹಣ ನೀಡಲು ಹೋಗಿದ್ದರು..? ಯಾರು ಆಮಿಷ ಒಡ್ಡಿದ್ದರು ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಮಾಜಿ ಉಪ ಮುಖಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ಹೇಳಿದ್ದಾರೆ.

ಬೆಳಗಾವಿ: ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಯಾರು ಹಣ ನೀಡಲು ಹೋಗಿದ್ದರು..? ಯಾರು ಆಮಿಷ ಒಡ್ಡಿದ್ದರು ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಮಾಜಿ ಉಪ ಮುಖಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ಹೇಳಿದ್ದಾರೆ.
ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶ್ರೀಮಂತ ಪಾಟೀಲ್ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನಗೂ ಅವರಿಗೂ ಭೇಟಿ ಆಗಿಲ್ಲ. ಅವರಿಗೆ ಯಾರು ಹಣ ಕೊಡಲು ಹೋಗಿದ್ದರು? ಯಾರು ಆಮಿಷ ಒಡ್ಡಿದ್ದರು ಎಂಬುವುದು ಪರಿಶೀಲನೆ ಆಗಬೇಕು ಎಂದು ಹೇಳಿದರು.
ಅಧಿಕಾರ ಶಾಶ್ವತವಲ್ಲ. ಅಧಿಕಾರದಲ್ಲಿ ಇದ್ದಾಗ ಮತ್ತು ಅವಕಾಶ ಕೊಟ್ಟಾಗ ಸದ್ಬಳಕೆ ಮಾಡಿಕೊಳ್ಳಬೇಕು. ಶ್ರೀಮಂತ ಪಾಟೀಲ್ ವೈಮನಸ್ಸಿನಿಂದ ಹಾಗೆ ಹೇಳಿದ್ದಾರೆ ಎಂದು ಅನ್ನಿಸುವುದಿಲ್ಲ. ಮಾತನಾಡುವ ಭರದಲ್ಲಿ ಆ ರೀತಿ ಹೇಳಿರಬಹುದು. ಈ ಬಗ್ಗೆ ಅವರನ್ನು ಖುದ್ದು ಭೇಟಿಯಾಗಿ ಮಾತನಾಡುವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


