'ಬಾರ್ ಸಲಹೆಗಾರ ಸಿಟಿ ರವಿ ಮಾರ್ಗದರ್ಶನದಲ್ಲಿ ಬಾರ್ ತೆರೆದು, ಬಿಜೆಪಿ ಕಚೇರಿಯಲ್ಲಿ ಕುಡಿದು ಬಡಿದಾಡಿಕೊಳ್ಳಲಿ'
ಮಾನಪ್ಪ ವಜ್ಜಲ್‌ರ ಪುತ್ರರಿಂದ ಮಾರಣಾಂತಿಕ ಹಲ್ಲೆ ನಡೆದರೂ ದೂರು ದಾಖಲಿಸಲಿಲ್ಲ, ರಾಜ್ಯದಲ್ಲಿ ಅಧಿಕಾರದಲ್ಲಿರುವಬಿಜೆಪಿ ಸರ್ಕಾರ ಆಡಳಿತದಲ್ಲಿ ಯುಪಿ ಮಾಡೆಲ್ ಅನುಸರಿಸಿ ಕರ್ನಾಟಕವನ್ನು 'ಗೂಂಡಾರಾಜ್' ಆಗಿ ಪರಿವರ್ತಿಸುತ್ತಿದೆ ಎಂದು ಟೀಕಿಸಿದೆ.

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಉದ್ಯಮಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಹರಿ ಹಾಯ್ದಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮಾನಪ್ಪ ವಜ್ಜಲ್‌ರ ಪುತ್ರರಿಂದ ಮಾರಣಾಂತಿಕ ಹಲ್ಲೆ ನಡೆದರೂ ದೂರು ದಾಖಲಿಸಲಿಲ್ಲ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಆಡಳಿತದಲ್ಲಿ ಯುಪಿ ಮಾಡೆಲ್ ಅನುಸರಿಸಿ ಕರ್ನಾಟಕವನ್ನು 'ಗೂಂಡಾರಾಜ್' ಆಗಿ ಪರಿವರ್ತಿಸುತ್ತಿದೆ ಎಂದು ಟೀಕಿಸಿದೆ.
ಹಿಂದೆ ಗೋವಿಂದ್ ಕಾರಜೋಳರ ಪುತ್ರ ಪೊಲೀಸರಿಗೆ 'ಬಾಯಲ್ಲಿ ಬೂಟು ಇಡುತ್ತೇನೆ' ಎಂದು ಬೆದರಿಕೆಯೊಡ್ಡಿದ್ದ. ಇಂದು ಮಾನಪ್ಪ ವಜ್ಜಲ್ ಪುತ್ರರು ನಶೆಯಲ್ಲಿ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಿಜೆಪಿ ನಾಯಕರು ತಮ್ಮ ಪುತ್ರರನ್ನು ರೌಡಿಗಳನ್ನಾಗಿ ತಯಾರು ಮಾಡುತ್ತಿರುವಂತಿದೆ ಎಂದು ಲೇವಡಿ ಮಾಡಿದೆ.
ಬಿಜೆಪಿ ನಾಯಕರು, ನಾಯಕರ ಮಕ್ಕಳು ಕಂಡ ಕಂಡಲ್ಲಿ ಕುಡಿದು, ಕಂಡ ಕಂಡವರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇದರ ಬದಲು 'ಬಾರ್ ಸಲಹೆಗಾರ' ಸಿಟಿ ರವಿ ಮಾರ್ಗದರ್ಶನದಲ್ಲಿ ಬಿಜೆಪಿ ಕಛೇರಿಯಲ್ಲಿಯೇ ಬಾರ್ ತೆರೆದುಕೊಳ್ಳಲಿ. ಅಲ್ಲೇ ಕುಡಿದುಕೊಳ್ಳಲಿ, ಅಲ್ಲೇ ಬಡಿದುಕೊಳ್ಳಲಿ, ಜನರಿಗೆ ತೊಂದರೆ ಕೊಡುವುದನ್ನ ಬಿಡಲಿ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


