ಉಪ ಚುನಾವಣಾ ಕ್ಷೇತ್ರಗಳಲ್ಲಿ ಬಿಜೆಪಿ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ: ಸಿಎಂ ಬೊಮ್ಮಾಯಿ
ಉಪಚುನಾವಣೆ ಘೋಷಣೆಯಾಗಿರುವ ಕ್ಷೇತ್ರಗಳಿಗೆ ಪಕ್ಷದಿಂದ ಚುನಾವಣಾ ವೀಕ್ಷಕರನ್ನು ಕಳುಹಿಸಿಕೊಡಲಾಗುತ್ತಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಉಪಚುನಾವಣೆ ಘೋಷಣೆಯಾಗಿರುವ ಕ್ಷೇತ್ರಗಳಿಗೆ ಪಕ್ಷದಿಂದ ಚುನಾವಣಾ ವೀಕ್ಷಕರನ್ನು ಕಳುಹಿಸಿಕೊಡಲಾಗುತ್ತಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಹಾನಗಲ್ ಹಾಗೂ ಸಿಂಧಗಿ ಮತಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಎರಡು ಕ್ಷೇತ್ರಗಳಿಗೆ ವೀಕ್ಷಕರನ್ನು ಕಳುಹಿಸಿಕೊಡುತ್ತೇವೆ. ಸ್ಥಳೀಯರಿಂದ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳನ್ನು ಅಖೈರುಗೊಳಿಸಲಾಗುವುದು ಎಂದರು.
ಎರಡೂ ಕ್ಷೇತ್ರಗಳಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುವ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಅಕ್ಟೋಬರ್ 30ರಂದು ಉಪ ಚುನಾವಣೆ ಮತ್ತು ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


