ನನ್ನನ್ನು ಮತ್ತೆ ಮಂತ್ರಿ ಮಾಡಿ, ಇಲ್ಲವೇ ಸಹೋದರನಿಗಾದರೂ ಸಚಿವ ಸ್ಥಾನ ನೀಡಿ: ಸಿಎಂ ಬಳಿ ಜಾರಕಿಹೊಳಿ ದುಂಬಾಲು!
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸುದೀರ್ಘ 1 ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸುದೀರ್ಘ 1 ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.
ರಾಜಕೀಯ ಪಿತೂರಿಗೆ ಬಲಿಪಶು ಆಗಿರು ತಮ್ಮನ್ನು ಮತ್ತೆ ಸಂಪುಟಕ್ಕ ಸೇರಿಸಿಕೊಳ್ಳಬೇಕೆಂದು ಬೆಳಗಾವಿ ಪ್ರಬಾವಿ ನಾಯಕ ರಮೇಶ್ ಜಾರಕಿಹೊಳಿ ಸಿಎಂ ಬಳಿ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ನನಗೆ ಸಚಿವ ಸ್ಥಾನ ನೀಡಲು ಸಾಧ್ಯವಾಗದಿದ್ದರೇ ತಮ್ಮ ಸಹೋದರ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗಾದರೂ ಸಂಪುಟದಲ್ಲಿ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬೊಮ್ಮಾಯಿ ಮುಂದಿನ ವಾರ ದೆಹಲಿಗೆ ತೆರಳುವ ಸಾಧ್ಯತೆಯಿದೆ, ಈ ವೇಳೆ ಖಾಲಿಯಿರುವ ನಾಲ್ಕು ಸಚಿವ ಸ್ಥಾನಗಳ ಭರ್ತಿ ಮತ್ತ ನಿಗಮ ಮಂಡಳಿಗಳ ನೇಮಕಾತಿ ಪಟ್ಟಿ ಅಂತಿಮಗೊಳಿಸುವ ನಿರೀಕ್ಷೆಯಿದೆ.
ಸರಿಯಾದ ಸಮಯದಲ್ಲಿ ಸೂಕ್ತಕ್ರಮ ಕೈಗೊಳ್ಳುವುದಾಗಿ ಬೊಮ್ಮಾಯಿ ಜಾರಕಿಹೊಳಿಗೆ ಭರವಸೆ ನೀಡಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಮತ್ತು ಇತರ ಚುನಾವಣೆಗಳಿಗೆ ಕೆಲವೇ ತಿಂಗಳು ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸದ್ಯ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಬಯಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಸಂಪುಟಕ್ಕೆ ಮತ್ತೆ ಸೇರಿಕೊಳ್ಳಲು ರಮೇಶ್ ಜಾರಕಿಹೊಳಿ ಲಾಬಿ ನಡೆಸುತ್ತಿದ್ದಾರೆ ಎಂದು ವಿಶ್ವಸಾರ್ಹ ಮೂಲಗಳು ತಿಳಿಸಿವೆ, ಆದರೆ ಮತ್ತೆ ಸಚಿವರಾಗಿ ಸಂಪುಟ ಸೇರುವುದು ಸುಲಭದ ಮಾತಲ್ಲ, ಮತ್ತೆ ಸರ್ಕಾರಕ್ಕೆ ಬೆದರಿಕೆ ಒಡ್ಡಬಹುದು. ಆದರೆ ವಾಲ್ಮೀಕಿ ಸಮುದಾಯದ ಮತ್ತೊಬ್ಬ ನಾಯಕ ಬಿ ಶ್ರೀರಾಮುಲು ಪಕ್ಷದಲ್ಲಿರುವುದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿದೆ. ಸದ್ಯ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಹೈಕೋರ್ಟ್ ನಲ್ಲಿದ್ದು, ಕ್ಲೀನ್ ಚಿಟ್ ಪಡೆದರೇ ಮಾತ್ರ ಸಂಪುಟ ಸೇರಲು ಸಾಧ್ಯ.
ಸದ್ಯ ಇರುವ ಪರಿಸ್ಥಿತಿಯಲ್ಲಿ ಸಿಎಂ ಬೊಮ್ಮಾಯಿ ಜಾರಕಿಹೊಳಿ ಸಹೋದರರನ್ನು ಎದುರು ಹಾಕಿಕೊಳ್ಳುವುದಿಲ್ಲ, ಏಕೆಂದರೇ ಬೆಳಗಾವಿ ರಾಜಕೀಯವನ್ನು ಗಮನದರಲ್ಲಿರಿಸಿಕೊಂಡಿರುವ ಪಕ್ಷ, ರಮೇಶ್ ಬದಲಿಗೆ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


