ರಾಜಕೀಯ

ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದಲ್ಲಿಯೂ ತಾಲಿಬಾನಿಗಳಿದ್ದಾರೆ: ಸಿದ್ದರಾಮಯ್ಯ ಪರ ಎಚ್.ವಿಶ್ವನಾಥ್ ಬ್ಯಾಟಿಂಗ್

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿರುವ ಮೇಲ್ಮನೆ ಬಿಜೆಪಿ ಸದಸ್ಯ ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ಸ್ವಪಕ್ಷ ನಾಯಕ ಸಿ.ಟಿ.ರವಿ ಆಡಿರುವ ಸಿದ್ದರಾಮಯ್ಯ ತಾಲಿಬಾನಿ ಹೇಳಿಕೆಗೆ...

ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದಲ್ಲಿಯೂ ತಾಲಿಬಾನಿಗಳಿದ್ದಾರೆ: ಸಿದ್ದರಾಮಯ್ಯ ಪರ ಎಚ್.ವಿಶ್ವನಾಥ್ ಬ್ಯಾಟಿಂಗ್
ಎಚ್.ವಿಶ್ವನಾಥ್
Published On :

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿರುವ ಮೇಲ್ಮನೆ ಬಿಜೆಪಿ ಸದಸ್ಯ ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ಸ್ವಪಕ್ಷ ನಾಯಕ ಸಿ.ಟಿ.ರವಿ ಆಡಿರುವ ಸಿದ್ದರಾಮಯ್ಯ ತಾಲಿಬಾನಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್, ಆರ್ ಎಸ್ ಎಸ್ ಬಹಳ ವರ್ಷಗಳಿಂದ ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದೆಲ್ಲೆಡೆಯಿದೆ‌. ಇದು ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ತಾಲೀಬಾನಿಗಳು ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳಲ್ಲಿಯೂ ಇದ್ದಾರೆ ಎಂದು ಹೇಳುವ ಮೂಲಕ ಸ್ವಪಕ್ಷದ ಸಿ.ಟಿ.ರವಿಗೆ ತಿರುಗೇಟು ನೀಡಿದರು.

ತಾಲಿಬಾನ್ ಗಳು ಯಾವ ಪಾರ್ಟಿಯಲ್ಲಿ ಇಲ್ಲ ಹೇಳಿ. ಎಲ್ಲಾ ಪಾರ್ಟಿಗಳಲ್ಲೂ ತಾಲಿಬಾನ್ ಗಳು ಇದ್ದಾರೆ. ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳಲ್ಲೂ ಇದ್ದಾರೆ ಎಂದು ವಿಶ್ವನಾಥ್ ಹೇಳಿದರು.

ಕುರುಬರನ್ನು ಕರೆದುಕೊಂಡು ಬನ್ನಿ, ಲಿಂಗಾಯತರನ್ನು ಕರೆದುಕೊಂಡು ಬನ್ನಿ ಎನ್ನುವುದು ಯಾವ ಕೋಮುವಾದ? ಮಾಜಿ ಸಿಎಂ ಆಗಿದ್ದ ಸಿದ್ದರಾಮಯ್ಯ ಯಾವುದೇ ಒಂದು ಸಂಘಟನೆಯನ್ನುದ್ದೇಶಿಸಿ ಮಾತನಾಡಬಾರದು ಎಂದು ತಮ್ಮ ಹೇಳಿಕೆಯನ್ನು ಬ್ಯಾಲೆನ್ಸ್ ಮಾಡಿದರು.

2015 ರಲ್ಲಿ ಶೆಪರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಸ್ಥಾಪಿಸಲಾಯಿತು. ಭಾರತದ ಬೇರೆ ಬೇರೆ ಕಡೆ ಇರುವ ಕುರುಬ ಸಮುದಾಯವನ್ನು ಒಂದುಗೂಡಿಸಲು ಇದರ ಸ್ಥಾಪನೆಯಾಯಿತು ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.