ರಾಜಕೀಯ

ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ: ಶಿವರಾಮ್ ಹೆಬ್ಬಾರ್

ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ.ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ: ಶಿವರಾಮ್ ಹೆಬ್ಬಾರ್
ಸಚಿವ ಶಿವರಾಮ್ ಹೆಬ್ಬಾರ್
Published On :

ಬೆಂಗಳೂರು: ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ.ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾರ್,ಇಂದಿರಾ ಕ್ಯಾಂಟೀನ್ ಹೆಸರನ್ನು ನಾಳೆಯೇ ಬದಲಾವಣೆ ಮಾಡುತ್ತೇವೆಂದು ಸಿಎಂ ಹೇಳಿಲ್ಲ.ಈ ಬಗ್ಗೆ ಸಿಎಂ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೂ ನಾವೆಲ್ಲ ಬದ್ಧ ಎಂದರು.

ಇನ್ನು ಮಿತ್ರಮಂಡಳಿಯಲ್ಲಿ ಕೆಲವರಿಗೆ ಸಚಿವ ಸ್ಥಾನ‌ ಕೈತಪ್ಪಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಿವರಾಮ್ ಹೆಬ್ಬಾರ್, ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಅತಿ ಶೀಘ್ರದಲ್ಲಿ ಸಿಎಂ ಒಳ್ಳೆಯ ತಿರ್ಮಾನ ಕೈಗೊಳ್ಳುತ್ತಾರೆ. ನಮ್ಮ ಸ್ನೇಹಿತರಿಗೆ ಸಚಿವ ಸ್ಥಾನ ಸಿಗುತ್ತದೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನದ ವಿಚಾರ ಕೊರ್ಟ್ ನಲ್ಲಿದೆ. ಎಲ್ಲವೂ ಮುಗಿದ ಮೇಲೆ ಸಚಿವ ಸ್ಥಾನ ಸಿಗುತ್ತದೆ ಎಂದು ಶಿವಾರಂ ಹೆಬ್ಬಾರ್ ಸ್ಪಷ್ಟಪಡಿಸಿದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.