2023 ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಗಳ ಪಟ್ಟಿ ರಿಲೀಸ್
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ 2023 ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ 2023 ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಕೆ ಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಸಂಭಾವ್ಯ ಅಭ್ಯರ್ಥಿಗಳನ್ನು ಘೋಷಿಸಿ, ಅವರನ್ನು ಅಭಿನಂದಿಸಿದರು. ವಿವಿಧ ಕ್ಷೇತ್ರಗಳಿಗೆ 50 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು (ಕೆಆರ್‌ಎಸ್) ಸೋಮವಾರ ಬಿಡುಗಡೆ ಮಾಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿ, ಜಿಲ್ಲಾ ಪ್ರವಾಸ ಕೈಗೊಂಡಿದೆ.
ಪ್ರೆಸ್‌ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ, ''ಪಕ್ಷದ ಕಚೇರಿಯಲ್ಲಿ ಡಿಸೆಂಬರ್ 12ರವರೆಗೆ ಆಕಾಂಕ್ಷಿಗಳ ಸಂದರ್ಶನ ನಡೆಸಿದ್ದೇವೆ. 123 ಮಂದಿ ಅರ್ಜಿ ಸಲ್ಲಿಸಿದ್ದು, ಅವರಲ್ಲಿ 70 ಮಂದಿ ಸಂದರ್ಶನಕ್ಕೆ ಹಾಜರಾಗಿದ್ದರು. ಮೊದಲ ಹಂತದಲ್ಲಿ 50 ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ,'' ಎಂದರು.
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಜಾತಿ ಓಲೈಕೆ ಹಾಗೂ ಕುಟುಂಬ ರಾಜಕಾರಣಕ್ಕೆ ಜೋತು ಬಿದ್ದಿವೆ. ಇದಕ್ಕೆ ಪ್ರತಿಯಾಗಿ ಪ್ರಾಮಾಣಿಕ, ಜನಪರ ರಾಜಕಾರಣದಲ್ಲಿ ಸಕ್ರಿಯರಾಗುವ ಹಾಗೂ ಹಣ, ಮದ್ಯದಂತಹ ಆಮಿಷ ಒಡ್ಡದೆಯೇ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಅಭ್ಯರ್ಥಿಗಳನ್ನು ಸಜ್ಜುಗೊಳಿಸುತ್ತೇವೆ. ಇದೇ ಕಾರಣಕ್ಕೆ ಸಾಕಷ್ಟು ಮುಂಚಿತವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ,'' ಎಂದು ಹೇಳಿದರು.
2018 ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಜಯನಗರದಿಂದ ಸ್ಪರ್ಧಿಸಿದ್ದ ರೆಡ್ಡಿ ಈ ಬಾರಿ ರಘುಪತಿ ಭಟ್ ಅವರಿಗೆ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಇತ್ತೀಚೆಗೆ ನಡೆದ ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯಲ್ಲಿಯೂ ಸಹ ಕೆಆರ್‌ಎಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಕೆಆರ್ ಎಸ್ ಕ್ರಮವಾಗಿ 500 ಮತ್ತು 900 ಮತಗಳನ್ನು ಗಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


