ನಾಯಕತ್ವ ಬದಲಾವಣೆ ಗುಸುಗುಸು: ಬಿರುಕು- ಭಿನ್ನಮತಕ್ಕೆ ಬ್ರೇಕ್ ಹಾಕಲು ನಡ್ಡಾ ಎಂಟ್ರಿ; ಪಕ್ಷ ತೊರೆಯುುವವರಿಗೆ ತಕ್ಕ ಶಾಸ್ತಿ!
ಬುಧವಾರ ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

ಬೆಂಗಳೂರು: ಬುಧವಾರ ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.
ಕಾರ್ಯಕಾರಿಣಿಯಲ್ಲಿ ಭಾಗವಹಿಸುವ ಮೂಲಕ ರಾಜ್ಯದಲ್ಲಿ ಸದ್ಯ ಚರ್ಚೆಯಾಗುತ್ತಿರುವ ನಾಯಕತ್ವ ಬದಲಾವಣೆ ವಿಷಯಕ್ಕೆ ಸಬಂಧಿಸಿದಂತೆ ಸ್ಪಷ್ಟ ಸಂದೇಶ ನೀಡಲಿದ್ದಾರೆ.
ಡಿಸೆಂಬರ್ 28 ಮತ್ತು 29 ರಂದು ನಡೆಯುವ ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಾತ್ರ ಭಾಗವಹಿಸುವುದಾಗಿ ತಿಳಿದು ಬಂದಿತ್ತು. ಆದರೆ ನಾಯಕತ್ವ ಬದಲಾವಣೆ ಗುಸುಗುಸು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ನಡ್ಡಾ ಅಖಾಡಕ್ಕಿಳಿಯುವುದು ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.
2023ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಪಕ್ಷದ ರಾಜ್ಯ ನಾಯಕತ್ವದ ಕೂಲಂಕುಷ ಪರೀಕ್ಷೆ ನಿರೀಕ್ಷಿಸಲಾಗಿದ್ದರೂ, ಬೇರೆ ರೀತಿಯ ಊಹಾಪೋಹಗಳಿಗೆ ತೆರೆ ಎಳೆಯಬೇಕಾಗಿದೆ. ಪಕ್ಷದ ಕೇಂದ್ರ ನಾಯಕತ್ವವು ಆಡಳಿತ ವಿರೋಧಿ ಮತ್ತು ಆಂತರಿಕ ಕಚ್ಚಾಟದ ವಿರುದ್ಧ ಹೋರಾಡಬೇಕಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 8 ಮತ್ತು 9 ರಂದು ಬೆಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಮತ್ತೊಂದು ಸುತ್ತಿನ ಚುನಾವಣಾ ಪೂರ್ವ ತಯಾರಿ ಕಾರ್ಯಕ್ರಮ ನಡೆಸುವ ಸಾಧ್ಯತೆಯಿದೆ.
ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿರುವ ಹಿರಿಯ ನಾಯಕರಾದ ವಿಶೇಷವಾಗಿ ಕೆ ಎಸ್ ಈಶ್ವರಪ್ಪ ಮತ್ತು ಮುರುಗೇಶ್ ನಿರಾಣಿ ಗೆ ಎಚ್ಚರಿಕೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಎಂಎಲ್ಸಿ ಚುನಾವಣೆ ವೇಳೆ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡ ನಾಯಕರ ವಿರುದ್ಧ ಹಂತಹಂತವಾಗಿ ಕ್ರಮಕೈಗೊಳ್ಳಲಾಗುವುದು.
ಅಲ್ಲದೆ, ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ತೊರೆಯಲು ಮುಂದಾಗಿರುವವರನ್ನು ವಜಾಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಕಿರಿಯ ಸಹೋದರ ಲಖನ್ ಸ್ಪರ್ಧಿಸಿ ಗೆದ್ದ ನಂತರ ಬೆಳಗಾವಿಯ ಉಭಯ ಕ್ಷೇತ್ರದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರು ಅನುಭವಿಸಿದ ಸೋಲನ್ನು ಹೈಕಮಾಂಡ್ ಗಮನಿಸಿದೆ ಎಂದು ಮೂಲಗಳು ತಿಳಿಸಿವೆ.
ಹುಬ್ಬಳ್ಳಿಯಲ್ಲ ಕಾರ್ಯಕಾರಣಿಯಲ್ಲಿ ಎರಡು ನಿರ್ಣಯಗಳನ್ನು ಅಂಗೀಕರಿಸುವ ಸಾಧ್ಯತೆಯಿದೆ . ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡಿದ ಬೊಮ್ಮಾಯಿ ಅವರನ್ನು ಶ್ಲಾಘಿಸುವುದು ಹಾಗೂ ಎರಡನೆಯದು ಬೆಳಗಾವಿ ಚಳಿಗಾಲದ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಿರುವುದಕ್ಕೆ ಬೊಮ್ಮಾಯಿ ಅವರಿಗೆ ಅಭಿನಂದಿಸುವುದು. ಹೈದರಾಬಾದ್ನಲ್ಲಿರುವ ಅಮಿತ್ ಶಾ ಕೂಡ ಹುಬ್ಬಳ್ಳಿ ಸಭೆ ವೇಳೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


