ರಾಜಕೀಯ

ಪಕ್ಷ ಸಂಘಟನೆಯ ಕೊರತೆಯೇ ಜೆಡಿಎಸ್ ಸೋಲಿಗೆ ಕಾರಣ: ಹೆಚ್ ಡಿ ಕುಮಾರಸ್ವಾಮಿ

ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕಾರ್ಯಕರ್ತರ ಒತ್ತಾಸೆ ಮೇರೆಗೆ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಿಸಿದ್ದೆವು ಹೊರತು ನಮಗೆ ಈ ಫಲಿತಾಂಶದ ಬಗ್ಗೆ ತಿಳಿದಿತ್ತು ಎಂದು ಹೇಳಿದ್ದಾರೆ.

ಪಕ್ಷ ಸಂಘಟನೆಯ ಕೊರತೆಯೇ ಜೆಡಿಎಸ್ ಸೋಲಿಗೆ ಕಾರಣ: ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Published On :

ಕೇತಗಾನಹಳ್ಳಿ(ರಾಮನಗರ): ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕಾರ್ಯಕರ್ತರ ಒತ್ತಾಸೆ ಮೇರೆಗೆ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಿಸಿದ್ದೆವು ಹೊರತು ನಮಗೆ ಈ ಫಲಿತಾಂಶದ ಬಗ್ಗೆ ತಿಳಿದಿತ್ತು ಎಂದು ಹೇಳಿದ್ದಾರೆ.

ಇಂದು ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ಮಾತನಾಡಿರುವ ಅವರು, ಹಾನಗಲ್ ಕ್ಷೇತ್ರದಲ್ಲಿ ನಮಗೆ ತಳಹದಿಯೇ ಇಲ್ಲ, ಹೀಗಿರುವಾಗ ಅಲ್ಲಿನ ಫಲಿತಾಂಶದ ಬಗ್ಗೆ ಹೆಚ್ಚು ನಿರೀಕ್ಷೆಯಿರಲಿಲ್ಲ, ಉಪ ಚುನಾವಣೆಗೆ ನಾನು ಹೆಚ್ಚು ಒತ್ತು ನೀಡುವುದಿಲ್ಲ ಎಂದರು. ಆದರೆ ಸಿಂದಗಿಯಲ್ಲಿ ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ, ಪಕ್ಷ ಸಂಘಟನೆಯ ಕೊರತೆಯೇ ನಮ್ಮ ಸೋಲಿಗೆ ಕಾರಣ ಎಂದು ವಿಶ್ಲೇಷಿಸಿದರು.

ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ 4 ಸಾವಿರದ 353 ಮತಗಳು, ಹಾನಗಲ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಹಾನಗಲ್ ನಲ್ಲಿ ಇದುವರೆಗೆ ಜೆಡಿಎಸ್ ಅಭ್ಯರ್ಥಿ ಕೇವಲ 629 ಮತಗಳನ್ನು ಗಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.