ರಾಜಕೀಯ

ನಟ ಪುನೀತ್ ರಾಜ್ ಕುಮಾರ್'ಗೆ ಕರ್ನಾಟಕ ರತ್ನ, ಪದ್ಮಶ್ರೀ ನೀಡಬೇಕು: ಡಿ.ಕೆ.ಶಿವಕುಮಾರ್

ಹಠಾತ್ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಮೇರು ವ್ಯಕ್ತಿ ಹಾಗೂ ಅಜಾತ ಶತ್ರು. ಹೀಗಾಗಿ ರಾಜ್ಯ ಜನತೆಯ ಒತ್ತಾಯದಂತೆ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಜೊತೆಗೆ ಮುಖ್ಯರಸ್ತೆಗೆ ಅವರ ಹೆಸರಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ನಟ ಪುನೀತ್ ರಾಜ್ ಕುಮಾರ್'ಗೆ ಕರ್ನಾಟಕ ರತ್ನ, ಪದ್ಮಶ್ರೀ ನೀಡಬೇಕು: ಡಿ.ಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Published On :

ಬೆಂಗಳೂರು: ಹಠಾತ್ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಮೇರು ವ್ಯಕ್ತಿ ಹಾಗೂ ಅಜಾತ ಶತ್ರು. ಹೀಗಾಗಿ ರಾಜ್ಯ ಜನತೆಯ ಒತ್ತಾಯದಂತೆ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಜೊತೆಗೆ ಮುಖ್ಯರಸ್ತೆಗೆ ಅವರ ಹೆಸರಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿನಿಮಾ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಪುನೀತ್ ಮಾಡಿದ ಸಾಧನೆ ದೊಡ್ಡದು. ಜೊತೆಗೆ ಅವರು ಅಜಾತ ಶತ್ರುವಾಗಿ ಬಾಳಿದವರು. ಹೀಗಾಗಿ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ನಗರದ ಪ್ರಮುಖ ರಸ್ತೆಗೆ ಇಡಬೇಕು. ಪದ್ಮಶ್ರೀ, ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯ ಕೇಳಿ ಬರುತ್ತಿದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಿಂದೆ ಬಂಗಾರಪ್ಪನವರ ಸರ್ಕಾರ ಇದ್ದಾಗ ವರನಟ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿತ್ತು. ಈಗ ಪುನೀತ್ ಅವರಿಗೆ ಈ ಗೌರವ ನೀಡಲು ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಆಗ್ರಹಿಸುತ್ತೇನೆಂದು ಹೇಳಿದ್ದಾರೆ.

ಇನ್ನು ಪುನೀತ್ ಅವರು ನಿಧನದಿಂದ ರಾಜ್ಯ ಈ ಬಾರಿ ಬಹಳ ಕೆಟ್ಟ ಕನ್ನಡ ರಾಜ್ಯೋತ್ಸವ ಕಂಡಿದೆ. ಕಳೆದ ಒಂದೂವರೆ ವರ್ಷದಿಂದ ಕೊರೋನಾದಿಂದ ರಾಜ್ಯ ಹಾಗೂ ದೇಶದಲ್ಲಿ ಕತ್ತಲೆಯಲ್ಲಿ ಮುಳುಗಿದ್ದವು. ಇದೀಗ ಈ ಬೆಳಕಿನ ಹಬ್ಬದ ಮೂಲಕ ಬೆಳಕು ದೊರೆಯುವಂತಾಗಲಿ ಎಂದು ಶುಭ ಹಾರೈಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.