ರಾಜಕೀಯ

ಮಾತೃ ಪಕ್ಷಕ್ಕೆ ಮರಳಿದ ಭಾವನಾ ರಾಮಣ್ಣ: ಕಮಲ ತೊರೆದು 'ಕೈ' ಹಿಡಿದ ನಟಿ!

ನಟಿ ಭಾವನಾ ಅವರು ಮತ್ತೆ ಕಾಂಗ್ರೆಸ್‌ ಸೇರಿದ್ದಾರೆ. ಅವರಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಂದೀಪ್‌ ಸುರ್ಜೇವಾಲ ಶುಭಾಶಯ ತಿಳಿಸಿದ್ದಾರೆ.

ಮಾತೃ ಪಕ್ಷಕ್ಕೆ ಮರಳಿದ ಭಾವನಾ ರಾಮಣ್ಣ: ಕಮಲ ತೊರೆದು 'ಕೈ' ಹಿಡಿದ ನಟಿ!
ರಂದೀಪ್ ಸುರ್ಜೇವಾಲಾ ಮತ್ತು ಭಾವನಾ
Published On :

ಬೆಂಗಳೂರು: ನಟಿ ಭಾವನಾ ಅವರು ಮತ್ತೆ ಕಾಂಗ್ರೆಸ್‌ ಸೇರಿದ್ದಾರೆ. ಅವರಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಂದೀಪ್‌ ಸುರ್ಜೇವಾಲ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸರ್ಜೇವಾಲ, ಕಾಂಗ್ರೆಸ್‌ನ ಮಾಜಿ ಕಾರ್ಯಕರ್ತೆ ಹಾಗೂ ನಟಿ ಭಾವನಾ ರಾಮಣ್ಣ ಅವರು ನನ್ನನ್ನು ಭೇಟಿಯಾದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಸೇರಿ, ಪಕ್ಷಕ್ಕಾಗಿ ದುಡಿಯುವ ಸಂಕಲ್ಪವನ್ನು ಅವರು ಮಾಡಿದ್ದಾರೆ.

ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್‌ ಪಕ್ಷವು ಪ್ರಾಬಲ್ಯ ಸಾಧಿಸಲಿದೆ ಎಂದು ನಾನು ಭಾವಿಸಿದ್ದೇನೆ. ಭಾವನಾ ಅವರಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಲ್ಲಿಯೇ ಇದ್ದ ಭಾವನಾ  2018ರ ಮೇ 10ರಂದು ಬಿಜೆಪಿ ಸೇರಿದ್ದರು.  ಖಕಳೆದ ವಿಧಾನಸಭಾ ಚುನಾವಣೆ  ವೇಳೆ ಭಾವನಾ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಟಿಕೆಟ್ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ನಿರಾಕರಿಸಿತ್ತು. ಕಾಂಗ್ರೆಸ್ ಮೇಲೆ ಮುನಿಸಿಕೊಂಡು ಸಭೆಯಿಂದ ಹೊರ ನಡೆದಿದ್ದರು.

ಅದಾದ ಮೇಲೆ ಕೈ ಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗಿದ್ದಿರು. ಬಿಜೆಪಿ ಪರ ಹಲವು ಚುನಾವಣಾ ಕ್ಯಾಂಪೇನ್ ನಲ್ಲಿ ಕಾಣಿಸಿಕೊಂಡು ಮತಯಾಚನೆ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.