ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಗ್ಯಾರಂಟಿ!: ಪ್ರಧಾನಿ ಮೋದಿ ಜೊತೆ ಸಭೆ ಬಳಿಕ ದೇವೇಗೌಡ ಹೇಳಿದ್ದೇನು?
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಪ್ರಧಾನಿ ಮೋದಿಯವರ ಬಳಿ ಚರ್ಚಿಸಲಾಗಿದೆ ಎಂದು ಜೆಡಿಎಸ್ ಪರಮೋಚ್ಚ ನಾಯಕ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ನವದೆಹಲಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಪ್ರಧಾನಿ ಮೋದಿಯವರ ಬಳಿ ಚರ್ಚಿಸಲಾಗಿದೆ ಎಂದು ಜೆಡಿಎಸ್ ಪರಮೋಚ್ಚ ನಾಯಕ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ದೆಹಲಿಯಲ್ಲಿಂದು ಪ್ರಧಾನಿ ಬಳಿಕ ಸುದ್ದಿಗಾರರೊಂದಿಗೆ ಮಾಡಿದ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಮಾಡುವುದಾಗಿ ಹೇಳಿದ್ದಾರೆ. ಇದಾದ ನಂತರ ಎಚ್. ಡಿ. ಕುಮಾರಸ್ವಾಮಿ ಮತ್ತು ಬಿಜೆಪಿಯ ನಾಯಕ ಬಿ. ಎಸ್. ಯಡಿಯೂರಪ್ಪ ಪರಿಷತ್ ಚುನಾವಣೆಯಲ್ಲಿ ಮೈತ್ತಿ ಬಗ್ಗೆ ಮಾತುಕತೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ ಎಂದರು.
ಮೈತ್ರಿ ಕುರಿತು ಒತ್ತಾಯವಿಲ್ಲ
ಈ ಬೆಳವಣಿಗೆ ನಂತರ ಮೈತ್ರಿ ಮಾಡಿಕೊಳ್ಳುವುದು ಪಕ್ಕವಾಗಿದೆ. ಮುಂದಿನ ಚುನಾವಣೆಯ ವೇಳೆ ಮೈತ್ರಿ ಬಗ್ಗೆ ಮಾತುಕತೆ ಮಾಡಿಲ್ಲ. ಮಲ್ಲಿಕಾರ್ಜುನ ಖರ್ಗೆಗೆ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಮನಸ್ಸಿದೆ. ಆದರೆ ಕಾಂಗ್ರೆಸ್ನ ಇತರ ನಾಯಕರಿಗೆ ಇದರ ಬಗ್ಗೆ ಮನಸ್ಸಿಲ್ಲ. ಹೀಗಾಗಿ ನಾವಾಗಿಯೇ ಮೈತ್ರಿಗೆ ಒತ್ತಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಾಸನದಲ್ಲಿ ಐಐಟಿ ವಿಚಾರ ಪ್ರಸ್ತಾಪ
ಹಾಸನದಲ್ಲಿ ಐಐಟಿ ಸ್ಥಾಪನೆ ಮಾಡುವ ಬಗ್ಗೆ ಈ ಹಿಂದೆ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಲಾಗಿತ್ತು ಅವರು ಸಾಧ್ಯವಿಲ್ಲ ಎಂದು ಪತ್ರ ಬರೆದಿದ್ದರು. ಆದರೆ ಈಗ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿಷಯ ಚರ್ಚೆ ಮಾಡಿರುವುದಾಗಿ ದೇವೇಗೌಡರು ಹೇಳಿದರು.
ಪ್ರಧಾನಿ ಮೋದಿಯವರು ಬಹಳ ಆತ್ಮೀಯವಾಗಿ ಮಾತನಾಡಿದ್ದಾರೆ. ಮಂಡಿ ನೋವಿದ್ದ ಕಾರಣ ಕೈ ಹಿಡಿದು ಬಾಗಿಲವರೆಗೂ ಬಿಟ್ಟು ಬಂದಿದ್ದಾರೆ ಎಂದರು. ಮೋದಿ ಮತ್ತು ದೇವೇಗೌಡರು ಕೈ ಹಿಡಿದುಕೊಂಡಿರುವ, ಕುರ್ಚಿಯಲ್ಲಿ ಕೂರಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


