ಇನ್ನಷ್ಟು ಕಾಂಗ್ರೆಸ್ ನಾಯಕರು ಬಿಜೆಪಿ ಸೇರಲಿದ್ದಾರೆ: ಮುನಿರತ್ನ
ಕೋಲಾರ ಕಾಂಗ್ರೆಸ್‌ನ ಇನ್ನೂ ಕೆಲವು ಪ್ರಮುಖ ನಾಯಕರು ಶೀಘ್ರದಲ್ಲೇ ಭಾರತೀಯ ಜನತಾ ಪಕ್ಷಕ್ಕೆ ಸೇರಲಿದ್ದಾರೆ ಎಂದು ತೋಟಗಾರಿಕೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸೋಮವಾರ ಹೇಳಿದ್ದಾರೆ.

ಕೋಲಾರ: ಕೋಲಾರ ಕಾಂಗ್ರೆಸ್‌ನ ಇನ್ನೂ ಕೆಲವು ಪ್ರಮುಖ ನಾಯಕರು ಶೀಘ್ರದಲ್ಲೇ ಭಾರತೀಯ ಜನತಾ ಪಕ್ಷಕ್ಕೆ ಸೇರಲಿದ್ದಾರೆ ಎಂದು ತೋಟಗಾರಿಕೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸೋಮವಾರ ಹೇಳಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಈಗಾಗಲು ಹಲವಾರು ನಾಯಕರು ಕಾಂಗ್ರೆಸ್ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಅಸಮಾಧಾನ ಹಿನ್ನೆಲೆಯಲ್ಲಿ ಮತ್ತಷ್ಟು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಿದರು.
ಕೋಲಾರ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚಂದ್ರಾರೆಡ್ಡಿ ಮತ್ತು ಎಐಸಿಸಿ ಮಾಜಿ ಸದಸ್ಯ ಎನ್ ಶ್ರೀನಿವಾಸ್ ಅವರು, ಬಿಜೆಪಿಗೆ ಸೇರ್ಪಡೆಯಾಗುವುದರಿಂದ ಕೋಲಾರ ಜಿಲ್ಲೆಯಲ್ಲಿ ಪಕ್ಷಕ್ಕೆ ಸಹಾಯವಾಗಲಿದೆ. ಇವರಿಬ್ಬರು ನಮ್ಮ ಪಕ್ಷ ಸೇರುವುದರಿಂದ ಜಿಲ್ಲಾ ಮಟ್ಟದಲ್ಲಿ ಬಿಜೆಪಿಗೆ ಲಾಭವಾಗಲಿದೆ. ಇಬ್ಬರೂ ನಾಯಕರು ಕೋಲಾರದ ಪ್ರಮುಖ ರಾಜಕಾರಣಿಗಳು. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ರಾಜಕೀಯ ಮುಖಂಡರಿಗೆ ಜಿಲ್ಲೆಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ಅಚ್ಚರಿಗಳು ಎದುರಾಗಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


